ದೆಹಲಿಯ ನರೇಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಬೆಂಕಿ ತಗುಲಿದ್ದು, ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಹಲವರು ಒಳಗಡೆ ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಹೀಗಾಗಿ ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel