ಸೀಮೆಎಣ್ಣೆ ಗೋದಾಮಿನಲ್ಲಿ ಬೆಂಕಿ ಅನಾಹುತ | ಅಪಾರ ನಷ್ಟ

October 23, 2022
2:04 PM

ಸೀಮೆಎಣ್ಣೆ ಗೋದಾಮಿನಲ್ಲಿ ಭಾರೀ ಬೆಂಕಿ ಅನಾಹುತ ಉಂಟಾಗಿದ್ದು, ಅಪಾರ ನಾಶ ನಷ್ಟ ಉಂಟಾಗಿದೆ. ಕಾಸರಗೋಡು ನಗರದ  ವಿದ್ಯಾನಗರದ ಬಳಿ ಗೋದಾಮಿನಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ದುರಂತ ನಡೆದ ಸಂದರ್ಭದಲ್ಲಿ ಗೋದಾಮಿನಲ್ಲಿ ಕಾರ್ಮಿಕರು ಇಲ್ಲದಿದ್ದುದರಿಂದ ಅಪಾಯ ತಪ್ಪಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಕಾಸರಗೋಡಿ ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು.

ಮುನೀರ್ ಎಂಬವರ ಮಾಲಕತ್ವದ ಎರಡಂತಸ್ತಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಅಗ್ನಿ ಶಾಮಕ ದಳ ಹಾಗೂ ಪರಿಸರ ವಾಸಿಗಳ ಸಕಾಲಿಕ ಕಾರ್ಯಾಚರಣೆಯಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.ಬೆಂಕಿ ಅನಾಹುತ ಸಂಭವಿಸಿದ ಕೂಡಲೇ ಈ ಕಟ್ಟಡದಲ್ಲಿದ್ದವರನ್ನು ತೆರವು ಗೊಳಿಸಲಾಯಿತು. ಕಾಸರಗೋಡಿನಿಂದ ಆಗಮಿಸಿದ ಮೂರು ಅಗ್ನಿಶಾಮಕ ಘಟಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror