ಪಟಾಕಿ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ 20 ಲಕ್ಷ ರೂಪಾಯಿ ಹಣವನ್ನು ದೋಚಿ ಪರಾರಿಯಾದ ಘಟನೆ ಬೆಂಗಳೂರಿನ ಅತ್ತಿಬೆಲೆ ಟೋಲ್ ಬಳಿಯ ಹೆದ್ದಾರಿಯಲ್ಲಿ ನಡೆದಿದೆ. ಪಟಾಕಿ ವ್ಯಾಪಾರಿ ಚಂದ್ರಶೇಖರ್ ರೆಡ್ಡಿ ಎಂಬವರು ತಮ್ಮ ವಾಹನದಲ್ಲಿ 20 ಲಕ್ಷ ರೂಪಾಯಿ ಹಣದೊಂದಿಗೆ ತೆರಳುವಾಗ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಚಂದ್ರಶೇಖರ್ ಭುಜಕ್ಕೆ ಹೊಡೆದು ಕಾರಿನ ಗಾಜನ್ನು ಪುಡಿ ಮಾಡಿದ್ದಾರೆ.
ಚಂದ್ರಶೇಖರ್ ಅವರು ಅತ್ತಿಬೆಲೆಯ ಪಟಾಕಿ ಅಂಗಡಿಯಿಂದ ತಮಿಳುನಾಡಿನ ಕಡೆಗೆ ಹೋಗುವ ಸಂದರ್ಭ ಈ ಘಟನೆ ನಡೆದಿದೆ. ಚಂದ್ರಶೇಖರ್ ಅವರ ಮೊಬೈಲ್ ಹಾಗು ಕಾರಿನ ಕೀ ಕಿತ್ತುಕೊಂಡು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಇನ್ಸ್ಪೆಕ್ಟರ್ ಕೆ ವಿಶ್ವನಾಥ್ ತಂಡ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel