ಪಟಾಕಿ ಗಡಿಬಿಡಿ | ಪ್ರತ್ಯೇಕ ಘಟನೆಯಲ್ಲಿ 12 ಮಂದಿಗೆ ಗಾಯ | ಹೊತ್ತಿ ಉರಿದ ಅಂಗಡಿ |

October 25, 2022
4:34 PM

ಪ್ರತ್ಯೇಕ ಘಟನೆಗಳಲ್ಲಿ ಪಟಾಕಿ ಕಾರಣದಿಂದ 12 ಮಂದಿ ಗಾಯಗೊಂಡಿದ್ದಾರೆ. 7 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಪಟಾಕಿ ಸಿಡಿತದಿಂದ ಪೆಟ್ರೋಲ್‌ ಕ್ಯಾನ್‌ ಗೆ ಬೆಂಕಿ ಹಿಡಿದು ಅಂಗಡಿ ಭಸ್ಮವಾದ ಘಟನೆ ನಡೆದಿದೆ. 

ಬೆಂಗಳೂರು ನಗರದಲ್ಲಿ ಪಟಾಕಿ ಅವಘಡಗಳು ತಕ್ಷಣಕ್ಕೆ ವರದಿಯಾಗಿದೆ. ಉಳಿದ ಜಿಲ್ಲೆಗಳ ಪಟಾಕಿ ಅವಘಡಗಳು ಇನ್ನಷ್ಟೆ ಬೆಳಕಿಗೆ ಬರಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಚಾಮರಾಜಪೇಟೆ ಮತ್ತು ಮೈಸೂರು ರಸ್ತೆಯಲ್ಲಿ ತಲಾ ಇಬ್ಬರು ಗಾಯಗೊಂಡಿದ್ದಾರೆ. ಚಾಮರಾಜಪೇಟೆಯ‌ 10 ವರ್ಷದ ಬಾಲಕ ಆಜಾದ್, 50 ವರ್ಷದ ರಮೇಶ್, ಮೈಸೂರು ರಸ್ತೆಯ 19 ವರ್ಷದ ಜಯಸೂರ್ಯ, 4 ವರ್ಷದ ಸುರಭಿ, ಸರ್ಜಾಪುರದ ಸಂಗೀತ ವರ್ಮಾ 49 ವರ್ಷ, ಅವೆನ್ಯೂ ರಸ್ತೆಯ ಹಬೀಬುಲ್ಲ 22 ವರ್ಷ, ಅನ್ನಪೂರ್ಣೇಶ್ವರಿ ನಗರದ 39 ವರ್ಷದ ಮಮತಾ ಅವರಿಗೆ ಪಟಾಕಿ ಸಿಡಿತದಿಂದ ಗಾಯಗಳಾಗಿವೆ ಎಂದು ವರದಿಯಾಗಿದೆ.

ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಪಾಳ್ಯಕೆರೆ ಗ್ರಾಮದಲ್ಲಿ ಪಟಾಕಿ ಸಿಡಿಯುವ ವೇಳೆ ಅಂಗಡಿಯಲ್ಲಿದ್ದ ಪೆಟ್ರೋಲ್‌ ಕ್ಯಾನ್‌ ಗೆ ಬೆಂಕಿ ತಗುಲಿ ಅಂಗಡಿ ಹೊತ್ತಿ ಉರಿದ ಘಟನೆ ನಡೆದಿದೆ. ಅವಘಡದಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror