ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ ನಗರ ಪಾಲಿಕೆಗೆ ಸೇರಿದ ಎಲ್ಲಾ ಉದ್ಯಾನವನಗಳು ಮತ್ತು ಕೆರೆಗಳಿಗೆ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ಕ್ರಮ ವಹಿಸುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆಯಲ್ಲಿನ ಹೋಂ ಸ್ಟೇ, ರೆಸಾರ್ಟ್, ಹೊಟೇಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಿಗೆ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳನ್ನು ಅನುಸರಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಾಟೆ ಹೇಳಿದ್ದಾರೆ. ಹೋಂಸ್ಟೇ, ರೆಸಾರ್ಟ್ ಮಾಲೀಕರು, ಪೊಲೀಸ್ ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಪಟಾಕಿ ಸಿಡಿತ ಮತ್ತಿತರ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

