ಪ್ರಥಮ ಚಿಕಿತ್ಸೆಯ ಸಂದರ್ಭದಲ್ಲಿ ಮೊಬೈಲ್ ಬಳಸಬಾರದು – ರೋ.ಕ್ಸೇವಿಯರ್ ಡಿಸೋಜಾ

October 21, 2020
8:31 PM

ಪ್ರಥಮ ಚಿಕಿತ್ಸೆ ಮಾಡುವ ಸಂದರ್ಭದಲ್ಲಿ ನಾವು ಮೊಬೈಲ್ ಬಳಸಬಾರದು. ಅಲ್ಲದೇ ಅಪಘಾತಗೊಂಡಿರುವ ವ್ಯಕ್ತಿಯ ಜೀವ ಉಳಿಸುವ ಕಾರ್ಯವಾಗಬೇಕೆ ವಿನಃ ಅನ್ಯ ಕಾರ್ಯಗಳ ಬಗೆಗೆ ಆಲೋಚನೆಗಳು ಇರಬಾರದು ಎಂದು ಪುತ್ತೂರಿನ ರೋಟರಿ ಕ್ಲಬ್ ನ ಅಧ್ಯಕ್ಷ ರೋ.ಕ್ಸೇವಿಯರ್ ಡಿಸೋಜಾ ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ನಡೆದ ಪ್ರಥಮ ಚಿಕಿತ್ಸಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ ಮನುಷ್ಯ ಎಷ್ಟೇ ಮುಂದುವರಿದರೂ ಕೂಡಾ ಎಂದೆಂದಿಗೂ ಮಾನವೀಯತೆಯನ್ನು ಮರೆಯಬಾರದು. ಯಾರಿಗಾದರೂ ಪ್ರಥಮ ಚಿಕಿತ್ಸೆಯ ಅವಶ್ಯಕತೆ ಇದ್ದರೆ ಆ ಕೂಡಲೇ ತಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದರು.

ಇದೇ ಸಂದರ್ಭದಲ್ಲಿ ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕಿನ ಡಾ.ರಾಮಚಂದ್ರ ಭಟ್ ಮಾತನಾಡಿ ಪ್ರಥಮ ಚಿಕಿತ್ಸೆ ಎಂದರೆ ಗಾಯ ಅಥವಾ ಅವಘಡಗಳಾದಾಗ ನೀಡುವ ಆರಂಭಿಕ ಆರೈಕೆ, ಹಾಗಾಗಿ ನಾವೆಲ್ಲರೂ ಪ್ರಥಮ ಚಿಕಿತ್ಸೆಯ ಬಗ್ಗೆ ನಮ್ಮೊಳಗೆ ಅರಿವನ್ನು ಮೂಡಿಸಿಕೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಿ.ಜಿ.ಭಟ್ ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೆಶಕ ವಾಮನ ಪೈ ಹಾಗೂ ಪುತ್ತೂರು ರೋಟರಿ ಕ್ಲಬ್ ನ ಕಾರ್ಯದರ್ಶಿ ಪ್ರೊ.ದತ್ತಾತ್ರೇಯ ಉಪಸ್ಥಿತರಿದ್ದರು. ಜೊತೆಗೆ ಕಾಲೇಜಿನ ಎನ್‍ಸಿಸಿ, ಎನ್‍ಎಸ್‍ಎಸ್, ರೋವರ್ ರೇಂಜರ್ಸ್ ಹಾಗೂ ರೆಡ್‍ಕ್ರಾಸ್ ನ ವಿದ್ಯಾರ್ಥಿಗಳು ಭಾಗವಹಿಸಿದರು. ಕಾಲೇಜಿನ ಎನ್‍ಎಸ್‍ಎಸ್‍ ಅಧಿಕಾರಿ ಶ್ರೀನಾಥ್ ಕಾರ್ಯಕ್ರಮವನ್ನು ನಿರ್ವಹಿಸಿ ಎನ್‍ಸಿಸಿ ಅಧಿಕಾರಿ ಲೆ.ಅತುಲ್ ಶೆಣೈ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು
September 25, 2026
7:14 PM
by: ಮಹೇಶ್ ಪುಚ್ಚಪ್ಪಾಡಿ
ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ
September 25, 2026
1:19 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ
September 25, 2026
12:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror