Advertisement
ಸುದ್ದಿಗಳು

ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರ | ಅಡಿಕೆಯ ಜೊತೆಗೆ ಮೀನು ಸಾಕಾಣಿಕೆಗೆ ಅನುಕೂಲ |

Share

ಆಧುನಿಕ ತಂತ್ರಜ್ಞಾನ ಬಳಸಿಕೊಂಡು ವೈಜ್ಞಾನಿಕ ರೀತಿಯಲ್ಲಿ ಮೀನುಗಾರಿಕೆಯಲ್ಲಿ ತೊಡಗಿದಲ್ಲಿ ಉತ್ತಮ ಲಾಭ ಗಳಿಸಬಹುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು  ಜಲಸಾರಿಗೆ  ಸಚಿವರಾದ ಎಸ್. ಅಂಗಾರ ಹೇಳಿದ್ದಾರೆ.

ಅವರು ಶುಕ್ರವಾರ ಸುಳ್ಯ ತಾಲ್ಲೂಕಿನ ಗೌಡ ಸಮುದಾಯ ಭವನದಲ್ಲಿ ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ಹಾಗೂ ಫ್ರೀಡಂ ಆ್ಯಪ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.      ಕೇಂದ್ರ ಸರ್ಕಾರ ಮೀನುಗಾರರ ಆದಾಯವನ್ನು ದ್ವಿಗುಣಗೊಳಿಸಲು ಹಾಗೂ ಆರ್ಥಿಕ ಭದ್ರತೆ ನೀಡಲು ಮತ್ಸ್ಯ ಸಂಪದ ಯೋಜನೆಯಡಿ ಮೀನು ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದು,  ತಾಲೂಕು, ಗ್ರಾಮಮಟ್ಟದಲ್ಲಿ ಮೀನುಗಾರಿಕೆಯಲ್ಲಿ ಆಸಕ್ತಿ ಇರುವ ರೈತರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಾನ್ಮುಖವಾಗಿದೆ. ಆ ದಿಸೆಯಲ್ಲಿ ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ ಮಾತನಾಡಿ, ಈ ಭಾಗದಲ್ಲಿ ರೈತರು ಅಡಿಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು, ತಮ್ಮ ಅಡಿಕೆ ತೋಟದಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ಮೀನು ಸಾಕಾಣಿಕೆ ಮಾಡಬಹುದಾಗಿದೆ ಎಂದರು.

ಮೀನುಗಾರಿಕೆ ನಿರ್ದೇಶಕರಾದ ರಾಮಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸುಳ್ಯ ಮತ್ತು ಪುತ್ತೂರು ಭಾಗದಲ್ಲಿ ಅಡಿಕೆ ಪ್ರಮುಖ ಬೆಳೆಯಲಾಗುತ್ತಿದೆ. ಅದರೊಂದಿಗೆ ರೈತರು ತಮ್ಮ ತೋಟದಲ್ಲಿ ಕೆರೆ ಹಾಗೂ ಕೃಷಿ ಹೊಂಡಗಳನ್ನು ನಿರ್ಮಿಸಿರುವುದರಿಂದ ಅಂತಹ ಕೃಷಿಕರಿಗೆ ಆಧುನಿಕ ಮೀನುಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕಾರ್ಯಗಾರದಲ್ಲಿ ರೈತರಿಗೆ 15 ಸಾವಿರ ಮೀನು ಮರಿಗಳನ್ನು ಉಚಿತವಾಗಿ ವಿತರಿಸಲಾಗುವುದು ಎಂದರು. ಮೀನುಗಾರಿಕೆ ಇಲಾಖೆ ವತಿಯಿಂದ ಇದೇ ವೇಳೆ ಸಚಿವರಿಗೆ ಸನ್ಮಾನಿಸಲಾಯಿತು. ಅರ್ಹ ರೈತರಿಗೆ ಮೀನು ಮರಿಗಳನ್ನು ಸಚಿವರು ವಿತರಿಸಿದರು.

ಮೀನುಗಾರಿಕೆ ನಿರ್ದೇಶನಾಲಯದ ಅಪರ ನಿರ್ದೇಶಕರಾದ (ಕರಾವಳಿ) ದಿನೇಶ್ ಕುಮಾರ್, ಮೀನುಗಾರಿಕೆ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಶಿವಕುಮಾರ ಮಗದ,  ಫ್ರೀಡಂ ಆಪ್ ಸಂಸ್ಥಾಪಕರಾದ ಸುಧೀರ್,  ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಸುಶ್ಮಿತ ರಾವ್, ಸಹಾಯಕ ನಿರ್ದೇಶಕರಾದ ದಿಲೀಪ ಕುಮಾರ್, ರೈತರು, ಕಾಲೇಜು ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

8 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

23 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

2 days ago