ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು.
ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದೆ. ಈ ವಿಚಾರ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ತೀರದ ಉದ್ದಕ್ಕೂ ಬಿದ್ದಿದ್ದ ಮೀನುಗಳನ್ನು ಹೆಕ್ಕಿ ಮನೆಗೆ ಕೊಂಡೊಯ್ದಿದ್ದಾರೆ.
ಕೆಲವರು ಈ ಮೀನುಗಳನ್ನು ಮಾರಾಟ ಕೂಡ ಮಾಡಿದ್ದಾರೆ. ಹೀಗೆ ಸುಮಾರು 500 ಕೆ.ಜಿ. ಮೀನು ದೊರೆತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ಮೀನುಗಾರಿಕೆ ನಡೆಸುವ ದೋಣಿಗಳ ಇಂಜಿನ್ ಶಬ್ದಕ್ಕೆ ಕಡಲ ತೀರಕ್ಕೆ ಬಂದಿರಬಹುದು ಎಂದು ಮೀನುಗಾರರು ಅಭಿಪ್ರಾಯ ಪಟ್ಟಿದ್ದಾರೆ.ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…