ಸೋಮವಾರ ಮಧ್ಯಾಹ್ನ ವೇಳೆಯಲ್ಲಿ ರಾಶಿ ರಾಶಿ ಬೂತಾಯಿ ಮೀನುಗಳು(Fish) ಮಲ್ಪೆಯ ಕಡಲ ತೀರದಲ್ಲಿ ಕಂಡುಬಂದಿದ್ದು, ಅಲೆಗಳೊಂದಿಗೆ ತೀರಕ್ಕೆ ಬಂದು ಬೀಳುತ್ತಿದ್ದ ಮೀನುಗಳನ್ನು ಹೆಕ್ಕಲು ಸ್ಥಳೀಯರು ಮುಗಿಬಿದ್ದಿದ್ದರು.
ಸಮುದ್ರದಲ್ಲಿ ಪಶ್ಚಿಮದ ಕಡೆಯಿಂದ ಪೂರ್ವದ ಕಡೆ ಸಾಗಿಬಂದ ಬೂತಾಯಿ ಮೀನುಗಳ ರಾಶಿ, ಅಲೆಗಳೊಂದಿಗೆ ತೀರಕ್ಕೆ ಬಂದು ಬಿದ್ದಿದೆ. ಈ ವಿಚಾರ ತಿಳಿದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿ, ತೀರದ ಉದ್ದಕ್ಕೂ ಬಿದ್ದಿದ್ದ ಮೀನುಗಳನ್ನು ಹೆಕ್ಕಿ ಮನೆಗೆ ಕೊಂಡೊಯ್ದಿದ್ದಾರೆ.
ಕೆಲವರು ಈ ಮೀನುಗಳನ್ನು ಮಾರಾಟ ಕೂಡ ಮಾಡಿದ್ದಾರೆ. ಹೀಗೆ ಸುಮಾರು 500 ಕೆ.ಜಿ. ಮೀನು ದೊರೆತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದು ಮೀನುಗಾರಿಕೆ ನಡೆಸುವ ದೋಣಿಗಳ ಇಂಜಿನ್ ಶಬ್ದಕ್ಕೆ ಕಡಲ ತೀರಕ್ಕೆ ಬಂದಿರಬಹುದು ಎಂದು ಮೀನುಗಾರರು ಅಭಿಪ್ರಾಯ ಪಟ್ಟಿದ್ದಾರೆ.ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…
ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…