ಮೀನುಗಾರಿಕೆ ಇಲಾಖೆ ವತಿಯಿಂದ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಮೀನು ಮೌಲ್ಯ ಉದ್ಯಮ ಘಟಕ ಮತ್ತು ಇತರೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
2024-25 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ, ರಾಜ್ಯ ವಲಯ, ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆಗಳ ಖರೀದಿ, ಮೀನು ಮರಿ ಖರೀದಿ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ನೀಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಜುಲೈ 11ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಜಿಲ್ಲಾ ಕಚೇರಿ ಹಾಗೂ ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel