ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರ ಬಂಧನ | ಭಾರಿ ವಿಧ್ವಂಸಕ ಕೃತ್ಯವೆಸಗಲು ಸಂಚು​ | ಪೊಲೀಸ್ ಕಮಿಷನರ್

July 19, 2023
12:08 PM
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆಸಿದೆ. ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ.

Advertisement

ಬಂಧಿತರಿಂದ ಪಿಸ್ತೂಲ್, ಜೀವಂತ ಗುಂಡು ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕೆಲವು ಪ್ರಮುಖ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ವಿಧ್ವಾಂಸಕ ಕೃತ್ಯ ಎಸಗಲು ಪ್ಲಾನ್ ಮಾಡಿದ್ದವರನ್ನು ಬಂಧಿಸಲಾಗಿದೆ. ಇದರೊಂದಿಗೆ ಅವರ ಪ್ಲ್ಯಾನ್​ ವಿಫಲಗೊಳಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿದ್ದ ಐದು ಜನರ ಮನೆ ಮೇಲೆ ದಾಳಿ ಮಾಡಲಾಗಿದ್ದು, ಏಳು ಪಿಸ್ತೂಲ್ 45 ಗುಂಡು, ಹನ್ನೆರಡು ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಇನ್ನು ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್​​ ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯಕ್ಕೆ ವಿದೇಶದಿಂದ ಫಂಡಿಂಗ್ ಆಗುತ್ತಿತ್ತು ಎಂದು ಮಾಹಿತಿ ನೀಡಿದರು.

2008ರಲ್ಲಿ ನಡೆದಿದ್ದ ಸೀರಿಯಲ್ ಸ್ಫೋಟ ಆರೋಪಿ ನಸೀರ್​ ಸಂಚು ರೂಪಿಸಿದ್ದ. ಟಿ.ನಸೀರ್​​​ ಹಾಗೂ ಜುನೈದ್ ಈ ಪ್ರಕರಣದ ಮಾಸ್ಟರ್ ಮೈಂಡ್​ಗಳಾಗಿದ್ದು, ಸದ್ಯ ಟಿ.ನಸೀರ್​ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾನೆ. 2008 ರ ಸೀರಿಯಲ್ ಬ್ಲಾಸ್ಟ್ ಕೇಸ್ ನ ಅರೋಪಿ ಟಿ ನಜೀರ್ ಎಲ್ ಇ ಟಿ ಸಂಘಟನೆಗೆ ಸೇರಿದ್ದವನು. ಈ ಶಂಕಿತರ ಉಗ್ರರು ಕೃತ್ಯವೆಸಗಲು ವಿದೇಶದಿಂದ ಹಣ ಬಂದಿದೆ. ಆರೋಪಿಗಳಿಗೆ ಆನ್​ಲೈನ್ ಹಾಗೂ ನಗದು ರೂಪದಲ್ಲಿ ಹಣ ಪೂರೈಕೆಯಾಗಿದೆ. ಈ ಬಗ್ಗೆ ಐವರು ಆರೋಪಿಗಳನ್ನು 15 ದಿನ ಪೊಲೀಸ್ ವಶಕ್ಕೆ ಪಡೆಯಲಾಗಿದೆ  ಎಂದು ಹೇಳಿದರು.

2017 ರಲ್ಲಿ ವ್ಯವಹಾರದ ಕಾರಣಕ್ಕೆ ಕೊಲೆ ನಡೆದಿತ್ತು.ಈ ಪ್ರಕರಣದಲ್ಲಿ 21 ಜನ ಜೈಲಿಗೆ ಹೋಗಿದ್ದರು. ಹದಿನೆಂಟು ತಿಂಗಳ ಕಾಲ ಜೈಲಿನಲ್ಲಿ ಇದ್ದರು. ಜೈಲಿನಲ್ಲಿದ್ದಾಗ ಉಗ್ರರ ಸಂಪರ್ಕ ಬೆಳೆಸಿ ಬೆಂಗಳೂರಿನಲ್ಲಿ ಬ್ಲಾಸ್ಟ್ ಮಾಡಬೇಕು ಎಂದು ಪ್ಲಾನ್ ಮಾಡಿದ್ದರು. 2020 ರಲ್ಲಿ ಜುನೈದ್ ರಕ್ತ ಚಂದನ ಕೇಸ್ ನಲ್ಲಿ ಐದು ತಿಂಗಳ ಕಾಲ ಜೈಲಿನಲ್ಲಿದ್ದ. ಜುನೈದ್ ವಿದೇಶದಲ್ಲಿ ಇದ್ದಾನೆ. ಆತನಿಂದಲೇ ಇವರುಗಳಿಗೆ ಏನು ಮಾಡಬೇಕು ಎಂದು ಮಾಹಿತಿ ನೀಡುತ್ತಿದ್ದ ಎಂದು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟರು

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ
April 16, 2025
9:41 PM
by: ಡಾ.ಚಂದ್ರಶೇಖರ ದಾಮ್ಲೆ
ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ
April 16, 2025
8:40 PM
by: ದ ರೂರಲ್ ಮಿರರ್.ಕಾಂ
ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!
April 16, 2025
11:18 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |
April 16, 2025
10:50 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group