Advertisement
ಸುದ್ದಿಗಳು

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Share

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ರಸ್ತೆ ಡಿವೈಡರ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ತುರ್ತಾಗಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಳೆ ಮತ್ತು ಬಿರುಗಾಳಿಯ ಪರಿಣಾಮವಾಗಿ ರಸ್ತೆಗಳ ಮಧ್ಯದ ಡಿವೈಡರ್‌ಗಳಿಗೆ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌ಗಳು ಕಳಚಿ ವಾಹನಗಳು ಹಾಗೂ ಪಾದಚಾರಿಗಳ ಮೇಲೆ ಬೀಳುವ ಸಾಧ್ಯತೆ ಇದ್ದು, ಇದರಿಂದ ಅಪಘಾತಗಳು ಮತ್ತು ಜೀವಹಾನಿ ಸಂಭವಿಸುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಸೂಚನೆ ನೀಡಲಾಗಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಸ್ತೆಗಳಲ್ಲಿ, ವಿಶೇಷವಾಗಿ ಡಿವೈಡರ್‌ಗಳಿಗೆ ಅಳವಡಿಸಿರುವ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಮತ್ತು ಬಂಟಿಂಗ್‌ಗಳನ್ನು ಮೊದಲ ಆದ್ಯತೆಯ ಮೇರೆಗೆ ತೆರವುಗೊಳಿಸಬೇಕು. ಕೈಗೊಂಡ ಕ್ರಮಗಳ ಕುರಿತು ಛಾಯಾಚಿತ್ರ ಸಮೇತ ವರದಿಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ದಿನಗಳಲ್ಲಿಯೂ ರಸ್ತೆಗಳ ಮಧ್ಯದ ಡಿವೈಡರ್‌ಗಳಿಗೆ ಯಾವುದೇ ಅನಧಿಕೃತ ಫ್ಲೆಕ್ಸ್‌, ಬ್ಯಾನರ್‌ ಹಾಗೂ ಬಂಟಿಂಗ್‌ಗಳನ್ನು ಅಳವಡಿಸದಂತೆ ಕ್ರಮ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿ ಅಳವಡಿಸಿದಲ್ಲಿ ತಕ್ಷಣ ತೆರವುಗೊಳಿಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಲಾಗಿದೆ.

ಈ ಆದೇಶದ ಅನುಷ್ಠಾನದಲ್ಲಿ ನಿರ್ಲಕ್ಷ್ಯ ಅಥವಾ ವಿಳಂಬ ಕಂಡುಬಂದಲ್ಲಿ, ಅಥವಾ ಯಾವುದೇ ಅಪಘಾತ ಸಂಭವಿಸಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಇತರೆ ಅನ್ವಯಿಸುವ ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

Dakshina Kannada Deputy Commissioner has directed all local bodies and gram panchayats to immediately remove unauthorized flex boards, banners and buntings installed on road dividers. The move aims to prevent accidents and loss of life during the ongoing monsoon season due to strong winds and heavy rains.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

19 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

20 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago