ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ| ಅತಿವೃಷ್ಟಿ ಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ – ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

October 27, 2024
6:22 AM
ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು.

ರಾಜ್ಯದಲ್ಲಿ ಹಿಂಗಾರು ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಿ ಮನೆ ಹಾನಿ ಮತ್ತು ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳ ಒಳಗಾಗಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

Advertisement

ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿ ಅಕಾರಿಗಳೊಂದಿಗೆ  ನಡೆಸಿದ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅತಿವೃಷ್ಟಿ ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಸುಮಾರು 551 ಕೋಟಿ ರೂಪಾಯಿ ತಹಶೀಲ್ದಾರ್ ಖಾತೆಯಲ್ಲಿ ಸುಮಾರು 116 ಕೋಟಿ ಸೇರಿದಂತೆ ಒಟ್ಟು 666 ಕೋಟಿಗೂ ಅಧಿಕ ಹಣ ಲಭ್ಯವಿದೆ ಎಂದು ತಿಳಿಸಿದರು.

ಜಿಲ್ಲಾ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಅತಿವೃಷ್ಟಿ ಪ್ರದೇಶಕ್ಕೆ ಸ್ವತಃ ಭೇಟಿ ನೀಡಿ, ಜನರಿಗೆ ಸಾಂತ್ವನ ನೀಡುವ ಕಾರ್ಯ ಮಾಡಬೇಕು ಎಂದು ತಿಳಿಸಿದ್ದಾಗಿ ಮುಖ್ಯಮಂತ್ರಿ ಹೇಳಿದರು. ಈ ಬಾರಿ ಜಲವಿದ್ಯುತ್ ಉತ್ಪಾದನೆಗೆ ಉತ್ತಮ ಪ್ರಮಾಣದ ನೀರು ಲಭ್ಯವಿದೆ. ಕಾವೇರಿ ಹಾಗೂ ಕೃಷ್ಣ ಕಣಿವೆಗಳಲ್ಲೂ ಉತ್ತಮ ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಾಕಷ್ಟು ನೀರನ್ನು ಇಟ್ಟುಕೊಂಡು ನೀರಾವರಿಗೆ ಸಮಪರ್ಕವಾಗಿ ಬಳಸಿಕೊಳ್ಳಬೇಕೆಂದು ತಿಳಿಸಿದರು.

ಕೆರೆಗಳ ಒತ್ತುವರಿ ತೆರವುಗೊಳಿಸುವುದು ಮತ್ತು ಕೆರೆಗಳ ಹೂಳೆತ್ತುವ ಕೆಲಸಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಯವರು ಸೂಚನೆ ನೀಡಿದರು. ದೀಪಾವಳಿ ಸಂದರ್ಭದಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪಟಾಕಿ ದಾಸ್ತಾನು ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಮುಖ್ಯಮಂತ್ರಿಯವರು  ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದರು.

ಕೃಷಿ ಸಚಿವ ಚಲುವರಾಯಸ್ವಾಮಿ, ಕಂದಾಯ ಸಚಿವ, ಕೃಷ್ಣಬೈರೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Advertisement

 

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ | ಪ್ರವಾಹ ಮತ್ತು ಭೂಕುಸಿತದಿಂದ ತೀವ್ರ ಪರಿಣಾಮ
July 4, 2025
9:22 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾಗಕ್ಕೂ ತಲುಪಿದ ಆಧುನಿಕ ಸಂಸ್ಕೃತಿ | ಕುಕ್ಕೆ ಸುಬ್ರಹ್ಮಣ್ಯದ ವಿದ್ಯಾರ್ಥಿಗಳ ವಿಡಿಯೋ ವೈರಲ್ | ಸೋಶಿಯಲ್‌ ಮೀಡಿಯಾದಲ್ಲಿ ಹಲವರಿಂದ ಅಸಮಾಧಾನ |
July 4, 2025
8:27 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04.07.2025| ರಾಜ್ಯದ ಕರಾವಳಿ ಭಾಗದಲ್ಲಿ ಏಕೆ ಉತ್ತಮ‌ ಮಳೆಯಾಗುತ್ತಿದೆ..? | ಇಂದೂ‌ ಸಾಮಾನ್ಯ ಮಳೆ
July 4, 2025
12:56 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group