ಭಾರೀ ಮಳೆ | ತತ್ತರಿಸಿದ ಉತ್ತರ | 40 ಕ್ಕೂ ಅಧಿಕ ಮಂದಿ ಬಲಿ | ಮೇಘಸ್ಫೋಟಕ್ಕೆ ಕರಗಿದ ಹಿಮಾಚಲ |

August 22, 2022
11:35 PM

ಕಳೆದ ಮೂರು ದಿನಗಳಿಂದ ಉತ್ತರ ಭಾರತದಲ್ಲಿ ತೀವ್ರ  ಮಳೆಯಿಂದಾಗಿ ಹಾಗೂ ಹಠಾತ್ ಪ್ರವಾಹದಲ್ಲಿ ಕನಿಷ್ಠ 40 ಜನರು ಮೃತಪಟ್ಟಿದ್ದಾರೆ  ಹಾಗೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ.

Advertisement
Advertisement
Advertisement

ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಕೆಲವು ಭಾಗಗಳಲ್ಲಿಭಾರೀ ಮಳೆಯಿಂದಾಗಿ  ಹಳ್ಳಿಗಳು ಜಲಾವೃತವಾಗಿದೆ. ಮನೆಗಳು ಧರೆಗೆ ಉರುಳಿದೆ. ರಸ್ತೆಗಳು ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಹಿಮಾಚಲ ಪ್ರದೇಶ ಒಂದರಲ್ಲೇ 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

Advertisement

ರಾಜಸ್ಥಾನದಲ್ಲೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ  ನದಿಗಳು ಮತ್ತು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವು ಕಡೆ  ಜಲಾವೃತಗೊಂಡಿದೆ.

Advertisement

ಒಡಿಶಾದ ಉತ್ತರದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ತೆರವು ಕಾರ್ಯ ನಡೆಯುತ್ತಿದೆ. ಉತ್ತರ ಒಡಿಶಾದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. 100 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಕ್ಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.

ಗುಜರಾತ್‌ನ ಕೆಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ  ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 24 ರಂದು ಕಛ್ ಜಿಲ್ಲೆಯಲ್ಲಿ  ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಬುಲೆಟಿನ್ ತಿಳಿಸಿದೆ.

Advertisement

ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಸೋಮವಾರ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದ್ದು, ರಾಜ್ಯದ ರಾಜಧಾನಿ ಭೋಪಾಲ್ ಮತ್ತು ಜಬಲ್‌ಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಸಾರಲಾಗಿತ್ತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ | ಸಂಕ್ರಾಂತಿ ಶುಭತರಲಿ
January 14, 2025
7:21 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-01-2025 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಮುಂದೆ ತಾಪಮಾನ ಏರಿಕೆ ನಿರೀಕ್ಷೆ |
January 13, 2025
1:18 PM
by: ಸಾಯಿಶೇಖರ್ ಕರಿಕಳ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror