ಕಳೆದ ಮೂರು ದಿನಗಳಿಂದ ಉತ್ತರ ಭಾರತದಲ್ಲಿ ತೀವ್ರ ಮಳೆಯಿಂದಾಗಿ ಹಾಗೂ ಹಠಾತ್ ಪ್ರವಾಹದಲ್ಲಿ ಕನಿಷ್ಠ 40 ಜನರು ಮೃತಪಟ್ಟಿದ್ದಾರೆ ಹಾಗೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಕೆಲವು ಭಾಗಗಳಲ್ಲಿಭಾರೀ ಮಳೆಯಿಂದಾಗಿ ಹಳ್ಳಿಗಳು ಜಲಾವೃತವಾಗಿದೆ. ಮನೆಗಳು ಧರೆಗೆ ಉರುಳಿದೆ. ರಸ್ತೆಗಳು ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ. ಅಲ್ಲಲ್ಲಿ ಭೂಕುಸಿತ ಉಂಟಾಗಿದೆ. ಈ ನಡುವೆ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಹಿಮಾಚಲ ಪ್ರದೇಶ ಒಂದರಲ್ಲೇ 13 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ರಾಜಸ್ಥಾನದಲ್ಲೂ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳು ಮತ್ತು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವು ಕಡೆ ಜಲಾವೃತಗೊಂಡಿದೆ.
ಒಡಿಶಾದ ಉತ್ತರದ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ತೆರವು ಕಾರ್ಯ ನಡೆಯುತ್ತಿದೆ. ಉತ್ತರ ಒಡಿಶಾದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಕಂಡುಬಂದಿದೆ. 100 ಕ್ಕೂ ಹೆಚ್ಚು ಹಳ್ಳಿಗಳ ಜನರನ್ನು ಸ್ಥಳಾಂತರಕ್ಕೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ಗುಜರಾತ್‌ನ ಕೆಲವು ಭಾಗಗಳಲ್ಲಿ ಆಗಸ್ಟ್ 24 ರವರೆಗೆ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 24 ರಂದು ಕಛ್ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಬುಲೆಟಿನ್ ತಿಳಿಸಿದೆ.
ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಸೋಮವಾರ ಮೂರನೇ ದಿನವೂ ಭಾರೀ ಮಳೆ ಮುಂದುವರಿದಿದ್ದು, ರಾಜ್ಯದ ರಾಜಧಾನಿ ಭೋಪಾಲ್ ಮತ್ತು ಜಬಲ್‌ಪುರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಸಾರಲಾಗಿತ್ತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…