Advertisement
ಸುದ್ದಿಗಳು

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

Share

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಾನ್ಸೂನ್ ಮಳೆ ಬಾಂಗ್ಲಾದೇಶದ ಆಗ್ನೇಯ ಭಾಗವನ್ನು ತತ್ತರಿಸಿದೆ. ಪ್ರವಾಹ ಮತ್ತು ಭೂಕುಸಿತಗಳಿಂದ ಕನಿಷ್ಠ 50 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು ಏಳು ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೆ. ರಸ್ತೆ, ಸೇತುವೆಗಳು ಮತ್ತು ಸಂಪರ್ಕ ವ್ಯವಸ್ಥೆಗಳು ಹಾನಿಗೊಳಗಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ಸವಾಲಿನದ್ದಾಗಿದೆ.

ಚಟ್ಟೋಗ್ರಾಮ್, ಕಾಕ್ಸ್ ಬಜಾರ್, ಬಾಂದರ್‌ಬಾನ್ ಹಾಗೂ ಮೌಲ್ವಿಬಜಾರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಮನೆಗಳು ಜಲಾವೃತವಾಗಿವೆ. 2.67 ಲಕ್ಷಕ್ಕೂ ಹೆಚ್ಚು ಕುಟುಂಬಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿದ್ದು, ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕುಡಿಯುವ ನೀರು ಮತ್ತು ಆಹಾರದ ಕೊರತೆಯೂ ಎದುರಾಗಿದೆ.

ರಸ್ತೆಗಳು ಕೊಚ್ಚಿಹೋಗಿರುವುದರಿಂದ ಸೇನೆ ಮತ್ತು ನೌಕಾಪಡೆ ದೋಣಿಗಳ ಮೂಲಕ ಆಹಾರ, ಕುಡಿಯುವ ನೀರು ಮತ್ತು ಔಷಧಿಗಳನ್ನು ಪೂರೈಸುತ್ತಿವೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸರ್ಕಾರ ಜನರಿಗೆ ಮನವಿ ಮಾಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಕಾಕ್ಸ್ ಬಜಾರ್‌ನ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲೂ ಭೂಕುಸಿತ ಸಂಭವಿಸಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿ 16 ರೋಹಿಂಗ್ಯಾ ನಿರಾಶ್ರಿತರು ಮೃತಪಟ್ಟಿದ್ದಾರೆ. ಗುಡ್ಡ ಪ್ರದೇಶಗಳಲ್ಲಿರುವ ತಾತ್ಕಾಲಿಕ ಆಶ್ರಯಗಳು ಹೆಚ್ಚಿನ ಅಪಾಯದಲ್ಲಿರುವುದರಿಂದ ಸಾವಿರಾರು ಮಂದಿಯನ್ನು ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.

ಹವಾಮಾನ ತಜ್ಞರ ಪ್ರಕಾರ, ಹವಾಮಾನ ಬದಲಾವಣೆಯಿಂದ ದಕ್ಷಿಣ ಏಷ್ಯಾದಲ್ಲಿ ಅತಿವೃಷ್ಟಿಯ ಘಟನೆಗಳು ಹೆಚ್ಚಾಗುತ್ತಿದ್ದು, ಬಾಂಗ್ಲಾದೇಶದಂತಹ ಕಡಿಮೆ ಎತ್ತರದ ಪ್ರದೇಶಗಳು ಇಂತಹ ಪ್ರಕೃತಿ ವಿಕೋಪಗಳಿಗೆ ಹೆಚ್ಚು ಗುರಿಯಾಗುತ್ತಿವೆ.

Severe monsoon floods and landslides have killed at least 44 people and stranded over one million residents across southeastern Bangladesh. Relief operations are underway as damaged roads, power outages, and landslides continue to hamper rescue efforts

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

36 minutes ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

43 minutes ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

8 hours ago

ಅಡಿಕೆ ಕ್ಷೇತ್ರಕ್ಕೆ ಬೇಕಿದೆ ಹೊಸ ರಾಷ್ಟ್ರೀಯ ಸಮನ್ವಯ ಮಾದರಿ

ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…

9 hours ago

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

19 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

1 day ago