ಎಲ್ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.
Source :PTI