Advertisement
MIRROR FOCUS

ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ | ಮೃತರ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ | 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ |

Share

ಎಲ್‌ ನಿನೋ ಪ್ರಭಾವ ಹಿನ್ನೆಲೆ ದೇಶದಾದ್ಯಂತ ಬರಗಾಲದ ಛಾಯೆ ಆವರಿಸಿತ್ತು. ಕಳೆದ 15 ದಿನಗಳಿಂದೀಚೆಗೆ ಅಲ್ಲಲ್ಲಿ ಮಳೆ ಆರಂಭವಾಗಿದೆ. ವಿಶ್ವದ ಕೆಲ ಭಾಗಗಳಲ್ಲಿ ಬರ ಇದ್ರೂ ಇನ್ನೂ ಕೆಲವೆಡೆ ಪ್ರವಾಹದ ಭೀತಿ ಎದುರಾಗಿದೆ. ದಕ್ಷಿಣ ಬ್ರೇಜಿಲ್ ನಲ್ಲಿ ಭಾರೀ ಮಳೆಗೆ ಪ್ರವಾಹವೇ (Brazil Floods) ಉಂಟಾಗಿದೆ. ಪ್ರವಾಹದ ತೀವ್ರತೆಗೆ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಬ್ರೆಜಿಲ್‌ನ ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರು (Rescue Official), ಅಗ್ನಿಶಾಮಕ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್‌ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ.

Source :PTI

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

9 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

11 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

23 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

23 hours ago

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

1 day ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

1 day ago