ಜ.26 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ | ಗಮನ ಸೆಳೆಯಲಿದೆ ಹಲವು ಮಳಿಗೆಗಳು | 10,000 ದಷ್ಟು ಹೂವಿನ ಗಿಡಗಳ ಅಲಂಕಾರ |

January 25, 2023
8:54 AM

ತೋಟಗಾರಿಕೆ ಇಲಾಖೆ, ಕದ್ರಿ ಉದ್ಯಾನವನ ಸಮಿತಿ ಹಾಗೂ ಮಂಗಳೂರಿನ ಸಿರಿ ತೋಟಗಾರಿಕೆ ಸಂಘ ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ನಗರದ ಕದ್ರಿ ಉದ್ಯಾನವನದಲ್ಲಿ ಇದೇ ಜ. 26 ರಿಂದ 29 ರವರೆಗೆ ಫಲಪುಷ್ಪ ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಎಚ್.ಆರ್. ನಾಯಕ್ ತಿಳಿಸಿದ್ದಾರೆ.

Advertisement
Advertisement

ಜ.26ರ ಬೆಳಿಗ್ಗೆ 10 ಗಂಟೆಗೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಫಲ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡುವರು. ಜಿಲ್ಲೆಯ ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿ ವರ್ಗದವರು ಭಾಗವಹಿಸಲಿದ್ದಾರೆ.

ತೋಟಗಾರಿಕೆ ಚಟುವಟಿಕೆಗಳು ಹಾಗೂ ಕಲೆಯನ್ನು ಸಾರ್ವಜನಿಕರಲ್ಲಿ ಉದ್ದೀಪನ ಗೊಳಿಸುವ ಮೂಲಕ ತೋಟಗಾರಿಕೆಯಲ್ಲಿ ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಪರಿಸರ ಸಂರಕ್ಷಣೆ ಸಾರ್ವಜನಿಕ ನೈರ್ಮಲ್ಯ, ಗ್ರಾಮ, ನಗರಗಳನ್ನು ಸುಂದರಗೊಳಿಸುವುದು, ಮೌಲ್ಯವರ್ಧನೆ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ ತೋಟಗಾರಿಕೆ ಉದ್ದಿಮೆಯನ್ನು ಮುಂದಕ್ಕೆ ಕೊಂಡಯುವ ಉದ್ದೇಶವನ್ನು ಈ ಮೂಲಕ ಹೊಂದಲಾಗಿದೆ.

ಫಲಪುಷ್ಪ ಪ್ರದರ್ಶನದಲ್ಲಿರುವ ವಿಶೇಷತೆಗಳು:  ಹೂವಿನಿಂದ ಅಲಂಕರಿಸಿದ ಬಿಂದಿಗೆಯಿಂದ ನೀರು ಹರಿಯುವ ವಿನ್ಯಾಸದ ಮಾದರಿಯನ್ನು ಆಕರ್ಷಣಿಯವಾಗಿ ಅಲಂಕಾರಗೊಳಿಸಿ ಪ್ರದರ್ಶಿಸಲಾಗುವುದು. ತೋಟಗಾರಿಕೆ ಇಲಾಖಾ ವತಿಯಿಂದ ಬೆಳೆಸಲಾಗಿರುವ ವಿವಿಧ ಜಾತಿಯ ಆಕರ್ಷಣೀಯವಾದ ಸುಮಾರು 10,000 ದಷ್ಟು ಸೂರ್ಯಕಾಂತಿ (ಹಳದಿ, ಕೆಸರಿ) ಇತರೆ ಹೂವಿನ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ವಿವಿಧ ರೀತಿಯ ಗಿಡಗಳನ್ನು ಕುಂಡಗಳಲ್ಲಿ ಪ್ರದರ್ಶನಕ್ಕೆ ಇಡಲಾಗುವುದು. ತರಕಾರಿ ಕೆತ್ತನೆ, ವಿವಿಧ ಮಾದರಿಯ ಕಟ್ ಫ್ಲವರ್ ಜೋಡಣೆ ಮಾಡಿ ಪ್ರದರ್ಶನಕ್ಕೆ ಇಡಲಾಗುವುದು. ಕ್ಷೇತ್ರ/ನರ್ಸರಿಗಳಲ್ಲಿ ಬೆಳೆಸಿರುವ ವಿವಿಧ ಜಾತಿಯ ಗಿಡಗಳನ್ನು ಮತ್ತು ತರಕಾರಿ ಸಸಿಗಳ ಮಾರಾಟಕ್ಕೆ ಮಳಿಗೆಯನ್ನು ತೆರೆಯಲಾಗುವುದು.      ವಿವಿಧ ಜಾತಿಯ ತರಕಾರಿ ಪ್ರಾತ್ಯಕ್ಷತೆಯನ್ನು ಪ್ರದರ್ಶಿಸಲಾಗುವುದು.    ತಾಲೂಕುಗಳಿಂದ ರೈತರು ಬೆಳೆಸಿರುವ ವಿವಿಧ ಜಾತಿಯ ಹಣ್ಣು ಮತ್ತು ತರಕಾರಿಗಳನ್ನು ಪ್ರದರ್ಶನಕ್ಕೆ ಇಡಲಾಗುವುದು.ಸಾರ್ವಜನಿಕರು ಬೆಳೆದಿರುವ ಬೋನ್ಸಾಯಿ, ಅಂಥೋರಿಯಂ, ಆರ್ಕಿಡ್ ಗಿಡಗಳು ಇನ್ನಿತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶನಕ್ಕೆ ಇಡಲಾಗುವುದು. ಸರಕಾರಿ ಇಲಾಖೆಗಳಿಂದ ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಆಧುನಿಕ ತಂತ್ರಜ್ಞಾನದ ಮಾಹಿತಿ ನೀಡಲು ಪ್ರದರ್ಶನ ಮಳಿಗೆಗಳನ್ನು ತೆರೆಯಲಾಗುವುದು.

ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 125 ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಹಾಗೂ ಉದ್ದಿಮೆದಾರರಿಂದ ಸಾರ್ವಜನಿಕರು ಖರೀದಿಸಲು ಹಾಗೂ ವೀಕ್ಷಿಸಲು ಅವಕಾಶವಿರುತ್ತದೆ.      ಫಲಪುಷ್ಪ ಪ್ರದರ್ಶನದ ವೀಕ್ಷಣೆಗೆ ವಯಸ್ಕರಿಗೆ 20, ಮಕ್ಕಳಿಗೆ 10ರೂ.ಗಳನ್ನು ನಿಗದಿ ಪಡಿಸಲಾಗಿದೆ, ಎಲ್ಲಾ ಶಾಲಾ ಮಕ್ಕಳಿಗೆ, ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಮತ್ತು ಭಿನ್ನ ಸಾರ್ಮಥ್ಯದ ಮಕ್ಕಳಿಗೆ ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ ಎಂದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?
February 15, 2026
10:56 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ
February 15, 2026
10:46 PM
by: ಮಿರರ್‌ ಡೆಸ್ಕ್
ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror