ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲಿ ಮಳೆ ಹಾಗು ದಟ್ಟ ಮಂಜು ಆವರಿಸಿದ ವಾತವಾರಣವಿದ್ದು ಈ ರಸ್ತೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿವಂತೆ ರಸ್ತೆ ಪ್ರಾಧಿಕಾರದ ಅಧಿಕಾರಿಗಳು ಸೂಚನೆ ನೀಡಿದಾರೆ. ಹಾಗೆಯೇ ಜಿಲ್ಲೆಯ ಮುಳ್ಳಯ್ಯನಗಿರಿ ಪ್ರದೇಶ ಮೂಡಿಗೆರೆ ತಾಲೂಕಿನ ಹಲವು ಪ್ರವಾಸಿ ತಾಣಗಳಲ್ಲಿ ಆಗಾಗ ದಟ್ಟ ಮಂಜು ಆವರಿಸುತ್ತಿದ್ದು ಮಂಜಿನಿಂದ ರಸ್ತೆ ಸರಿಯಾಗಿ ಕಾಣದೆ ಸಮಸ್ಯೆಗಳಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ. ಇನ್ನು ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಇಂದು ಮುಂಜಾನೆಯಿಂದಲ್ಲು ಗಾಳಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel