ಕಾಂಗ್ರೆಸ್ ಸರ್ಕಾರದ ಉಚಿತ ಯೋಜನೆಗಳ ಹಿನ್ನೆಲೆಯಲ್ಲಿ ಇತ್ತೀಚೆಗೆ ಪಡಿತರ ಚೀಟಿ ಮಾಡಿಸಲು ಹೆಚ್ಚಿನ ಜನ ಅರ್ಜಿ ಹಾಕುತ್ತಿದ್ದಾರೆ. ಎಲ್ಲದಕ್ಕೂ ದಾಖಲಾತಿಯಾಗಿ ರೇಷನ್ ಕಾರ್ಡ್ ಕಡ್ಡಾಯವಾಗಿರೋದ್ರಿಂದ ರೇಷನ್ ಕಾರ್ಡ್ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ.
ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಸ್ಥರು ವೈಟ್ ಬೋರ್ಡ್ ಕಾರ್ಡ್ ಹೊಂದಿದ್ದರೆ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಈ ಬಗ್ಗೆ ನಾವು ಸದ್ಯಕ್ಕೆ ಯಾವುದೇ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಆಹಾರ ಸಚಿವರು, ರೇಷನ್ ಕಾರ್ಡ್ಗಾಗಿ ಒಂದು ವರ್ಷದಿಂದ ಪೆಂಡಿಂಗ್ ಇರುವ 3 ಲಕ್ಷ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡುತ್ತೇವೆ. ಅರ್ಹ ಫಲಾನುಭವಿಗಳನ್ನು ಪರಿಶೀಲಿಸುವಂತೆ ಸೂಚಿಸುತ್ತೇನೆ ಎಂದು ಹೇಳಿದರು. ಈ ಹಿಂದೆ 21 ಲಕ್ಷ ಕಾರ್ಡ್‌ಗೆ ಬ್ಯಾಂಕ್ ಅಕೌಂಟ್ ಇರಲಿಲ್ಲ. 14 ಲಕ್ಷ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ, ಇನ್ನು 7 ಲಕ್ಷ ಆಗಬೇಕು. ಕೂಡಲೇ ಉಳಿದ ಲಿಂಕ್ ಮಾಡಲಾಗುತ್ತೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ದಾರರಿಗೆ ಕಾರು ಇದ್ದರೆ ಕ್ಯಾನ್ಸೆಲ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ಬಿಪಿಎಲ್ ಇದ್ದವರು ಸಣ್ಣ ಕಾರು ಇಟ್ಟುಕೊಂಡಿರುತ್ತಾರೆ. ನನ್ನ ಗಮನಕ್ಕೂ ಈ ವಿಚಾರ ಬಂದಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮೊದಲು ಬಿಪಿಎಲ್ ಕಾರ್ಡ್ ಅರ್ಹತೆ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಈ ಹಿಂದಿನ ಸರ್ಕಾರದಲ್ಲಿ ವಿಲೇವಾರಿ ಮಾಡದೆ ಉಳಿದುಕೊಂಡಿರುವ ಅರ್ಜಿಯನ್ನು ಮೊದಲು ಪರಿಶೀಲನೆ ನಡೆಸುತ್ತೇವೆ. ಸದ್ಯಕ್ಕೆ ಕಾರು ಇದ್ದರೆ ಬಿಪಿಎಲ್ ರದ್ಧತಿ ಬಗ್ಗೆ ಕ್ರಮ ಆಗುವುದಿಲ್ಲ ಎಂದು ಮುನಿಯಪ್ಪ ತಿಳಿಸಿದರು.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಿನ್ನೆಲೆಯಲ್ಲಿ ರೇಷನ್ ಕಾರ್ಡ್ಗಳಿಗೆ ಭಾರೀ ಬೇಡಿಕೆ ಹೆಚ್ಚಾಗಿದ್ದು, ಸದ್ಯ ಹೊಸ ಕಾರ್ಡ್ಗಳನ್ನು ಕೊಡಲು ಆರ್ಥಿಕ ಇಲಾಖೆ ಅನುಮತಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಹೊಸ ಅರ್ಜಿಗಳನ್ನು ತೆಗೆದುಕೊಳ್ಳುತ್ತಿಲ್ಲ. ಆದರೆ ಈಗಾಗಲೇ ಸಲ್ಲಿಕೆ ಆಗಿರುವ ಅರ್ಜಿಗಳ ಪರಿಶೀಲನೆಗೆ ಮುಂದಾಗಿದೆ. ಇನ್ನು, ಈ ಹಿಂದೆ ತಪ್ಪು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಮೇಲೆ ಕ್ರಮಕ್ಕೂ ಆಹಾರ ಇಲಾಖೆ ಮುಂದಾಗಿದೆ. ಸುಮಾರು 70 ಸಾವಿರಕ್ಕೂ ಅಧಿಕ ಸರ್ಕಾರಿ ಇಲಾಖೆ ಸಿಬ್ಬಂದಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದು ಕಂಡು ಬಂದಿದೆ. ಈ ಕಾರ್ಡ್ಗಳನ್ನು ರದ್ದು ಮಾಡಲು ಇಲಾಖೆ ಮುಂದಾಗುತ್ತಿದೆ.
– ಅಂತರ್ಜಾಲ ಮಾಹಿತಿ
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…