ದೇಶದ ಪ್ರತಿಯೊಬ್ಬರಿಗೂ ಆಹಾರ ಭದ್ರತೆ ಒದಗಿಸುವುದು ಸರ್ಕಾರದ ಪ್ರಮುಖ ಕರ್ತವ್ಯವಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪ್ರತಿವರ್ಷ 2 ಲಕ್ಷ 11 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಷಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಅವರು, ನಗರ ಪ್ರದೇಶದಲ್ಲಿ ಶೇಕಡ 50ರಷ್ಟು, ಗ್ರಾಮೀಣ ಪ್ರದೇಶದಲ್ಲಿ ಶೇಖಡ 75ರಷ್ಟು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲು ಉದ್ದೇಶಿಸಿದೆ. ಇದು ಆತಂಕಕಾರಿ ವಿಷಯವಾಗಿದ್ದು, ಯಾವುದೇ ಕಾರಣಕ್ಕೂ ಎಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸದಂತೆ ರಾಜ್ಯ ಸರ್ಕಾರವನ್ನು ತಾವು ಒತ್ತಾಯಿಸುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನ ಅವರು, ಗಾನ ಗಂಧರ್ವ ಪಂಡಿತ್ ಅರ್ಜುನ ಸಾ ನಾಕೋಡ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಹಾಗೂ ಕ್ಷಮತಾ ಸೇವಾ ಸಂಸ್ಥೆ ಮತ್ತು ಸ್ವರ್ಣ ಗ್ರೂಪ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಸಂಗೀತ ಮಹೋತ್ಸವ-24 ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಡಿತ್ ಬಾಲಚಂದ್ರ ನಾಕೋಡ, ಸ್ವರ್ಣ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿ.ಎಸ್.ವಿ.ಪ್ರಸಾದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಬಳಿಕ ಜಯತೀರ್ಥ್ ಮೆವುಂಡಿ ಅವರ ತಂಡ ಸುಮಧುರ ಗಾಯನ ಪ್ರಸ್ತುತಪಡಿಸಿದರು.
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಈಚೆಗೆ…
ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ನಡೆದ ಕಲಾ ಸ್ಪರ್ಧೆಯಲ್ಲಿ ಸಂಸ್ಕೃತಿಯ ಚಲನೆ ಎನ್ನುವ ಕಲಾ…