ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ ಇದೇ 21 ರಿಂದ ಜೂನ್ 4 ರವರೆಗೆ ಹಮ್ಮಿಕೊಳ್ಳಲು ಪಶು ಸಂಗೋಪನಾ ಇಲಾಖೆ ನಿರ್ಧರಿಸಿದೆ.ಎಲ್ಲಾ ಜಿಲ್ಲೆಗಳಲ್ಲೂ ಈ ಅಭಿಯಾನವನ್ನು ಯಶಸ್ವಿಗೊಳಿಸಲು ಈಗಾಗಲೇ ಪಶು ವೈದ್ಯಾಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಅಭಿಯಾನ ಯಶಸ್ವಿಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ಯಾದಗಿರಿ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೌಡ ಹೇಳಿದ್ದಾರೆ. ಯಾದಗಿರಿಯಲ್ಲಿ ಅಭಿಯಾನದ ಪೂರ್ವ ಸಿದ್ಧತೆ ಕುರಿತು ಮಾತನಾಡಿದ ಅವರು, ರೈತರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಕಾಲುಬಾಯಿ ರೋಗ ನಿಯಂತ್ರಿಸಲು ಇಲಾಖೆ ಕೈಗೊಂಡ ಕ್ರಮಗಳಿಗೆ ರೈತರು ಸಹಕರಿಸಬೇಕು ಎಂದು ಹೇಳಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel