ಅ. 2 ರಿಂದ 15 ರವರೆಗೆ ದ ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಜ್ವರ ಲಸಿಕೆ

October 1, 2020
8:11 PM
ಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅಕ್ಟೋಬರ್ 02 ರಿಂದ 15 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಒಟ್ಟು 238000 (ದನ, ಎಮ್ಮೆ, ಹಂದಿ) ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕಲಾಗುತ್ತದೆ.

Advertisement
Advertisement
Advertisement
Advertisement

ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.

Advertisement

ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೆ.9 ಸುಳ್ಯದಲ್ಲಿ ಮೊಸರು ಕುಡಿಕೆ ಉತ್ಸವ | ಮಾಜಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಆಹ್ವಾನ |
August 25, 2024
10:23 PM
by: ದ ರೂರಲ್ ಮಿರರ್.ಕಾಂ
ಮಾನಸ ಭಾರದ್ವಾಜ್ ಗೆ ಡಾಕ್ಟರೇಟ್ ಪದವಿ
June 5, 2024
11:00 AM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ವಿಕಿಪೀಡಿಯ ಜ್ಞಾನವನ್ನು ತಿಳಿದುಕೊಳ್ಳುವ ಜೊತೆ ಹಂಚುವ ಕೆಲಸ ಮಾಡುತ್ತಿದೆ
February 21, 2024
7:57 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror