ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.
ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…