Advertisement
Local mirror

ಅ. 2 ರಿಂದ 15 ರವರೆಗೆ ದ ಕ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಚಿತ ಕಾಲುಬಾಯಿ ಜ್ವರ ಲಸಿಕೆ

Share
ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ದನ, ಎಮ್ಮೆ, ಹಂದಿಗಳಿಗೆ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪಲ್ಸ್ ಪೋಲಿಯೋ ಮಾದರಿ 17 ನೇ ಸುತ್ತಿನ ಕಾಲು ಬಾಯಿ ಜ್ವರ ಲಸಿಕಾ ಕಾರ್ಯಕ್ರಮ ಅಕ್ಟೋಬರ್ 02 ರಿಂದ 15 ರವರೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ ಒಟ್ಟು 238000 (ದನ, ಎಮ್ಮೆ, ಹಂದಿ) ಜಾನುವಾರುಗಳಿಗೆ ಉಚಿತವಾಗಿ ಕಾಲುಬಾಯಿ ಜ್ವರ ಲಸಿಕೆಯನ್ನು ಹಾಕಲಾಗುತ್ತದೆ.

ಕಾಲು ಬಾಯಿ ಜ್ವರವು ವೈರಾಣುವಿನಿಂದ ಹರಡುವ ರೋಗವಾಗಿದ್ದು, ರೋಗ ತಗುಲಿದ ನಂತರ ಚಿಕಿತ್ಸೆ ಮತ್ತು ನಿಯಂತ್ರಣ ಕಷ್ಟಸಾಧ್ಯವಾಗಿರುತ್ತದೆ.ಆದುದರಿಂದ ರೋಗವು ಬಾರದ ರೀತಿಯಲ್ಲಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕುವುದು ಏಕೈಕ ಮಾರ್ಗವಾಗಿರುತ್ತದೆ.ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿದ್ದರೂ ಸಹ ಪ್ರತಿ 6 ತಿಂಗಳಿಗೊಮ್ಮೆ ಕೈಗೊಳ್ಳುವ ಸಾಮೂಹಿಕ ಲಸಿಕಾ ಕಾರ್ಯಕ್ರಮದಲ್ಲಿ ತಪ್ಪದೇ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗವನ್ನು ಸಂಪೂರ್ಣ ನಿರ್ಮೂಲನೆ ಮಾಡುವುದು ಅವಶ್ಯಕವಾಗಿದೆ.

ಪಶುಪಾಲನಾ ಇಲಾಖೆ ಮತ್ತು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ಗ್ರಾಮಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆಯನ್ನು ಹಾಕಲಾಗುವುದು.ಲಸಿಕಾ ಕಾರ್ಯಕ್ರಮದ ಯಶಸ್ವಿಗಾಗಿ 41-ಪಶುವೈದ್ಯಾಧಿಕಾರಿ ಮತ್ತು 251-ಸಿಬ್ಬಂದಿಯವರನ್ನೊಳಗೊಂಡ ಒಟ್ಟು 34 ತಂಡಗಳನ್ನು ರಚಿಸಲಾಗಿದ್ದು, ಪ್ರತಿ ತಂಡಕ್ಕೆ ಒಂದು ವಾಹನದ ವ್ಯವಸ್ಥೆ ಮಾಡಲಾಗಿದೆ.ಲಸಿಕೆ ಹಾಕುವ ಹಿಂದಿನ ದಿನ ಇಲಾಖೆಯ ಸಿಬ್ಬಂದಿಗಳು ಹಳ್ಳಿಗಳಲ್ಲಿ ಪ್ರಚಾರ ನಡೆಸಲಿರುವರು.ನಿಗದಿತ ದಿನಾಂಕ ಮತ್ತು ಸಮಯದಂದು ಜಾನುವಾರು ಮಾಲೀಕರು, ರೈತರು ತಾವು ಸಾಕಾಣಿಕೆ ಮಾಡುತ್ತಿರುವ ದನ, ಕರು, ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವುದರಂದಿಗೆ ಕಾಲು ಬಾಯಿ ಜ್ವರ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಸಹಕರಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

1 day ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

1 day ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

2 days ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

2 days ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

2 days ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

2 days ago