ಕಡಲಿಗಿಳಿದು ಮೀನು ಹಿಡಿಯುವ ಮೀನುಗಾರರ ಹಿತರಕ್ಷಣೆಗೆ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿದ್ದು, ಇದು ರಾಜ್ಯದಲ್ಲೇ ಪ್ರಪ್ರಥಮವಾಗಿದೆ.
ಇಂದು ತಮ್ಮ 15ನೇ ಬಜಟ್ (Karnataka Budget 2024) ಮಂಡನೆ ಮಾಡಿದ ಅವರು, ಮೀನುಗಾರರ ರಕ್ಷಣೆಗೆಂದು ಸಮುದ್ರ ಅಂಬ್ಯುಲೆನ್ಸ್ (Sea Ambulance) ಖರೀದಿಗೆ 7 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3,000 ಕೋಟಿ ರೂ.ಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಮತ್ಸ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರದ ರಾಜ್ಯದ ಪಾಲು 3,000 ರೂ ಗಳಿಗೆ ಹೆಚ್ಚಳ ಮಾಡುವುದಾಗಿ ಸಿಎಂ ತಿಳಿಸಿದರು. ವಿವಿಧ ವಸತಿ ಯೋಜನೆಗಳಡಿ 10,000 ವಸತಿರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.
– ಅಂತರ್ಜಾಲ ಮಾಹಿತಿ
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…