ಮುಂಗಾರು ಪ್ರವೇಶಿಸಿ ಕೇವಲ ಒಂದು ವಾರ ಸುರಿದ ಮಳೆ ಮತ್ತೆ ಎಲ್ಲಿ ಹೋಯ್ತು ಅನ್ನೋದೆ ಗೊತ್ತಾಗಲಿಲ್ಲ. ಅದಾಗಿ ಸುಮಾರು ಎರಡು ತಿಂಗಳ ನಂತರ ಕರಾವಳಿ, ಮಲೆನಾಡಿನಲ್ಲಿಮಳೆಯ ಆರ್ಭಟ ಆರಂಭವಾಗಿದೆ. ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡು ಸೇರಿದಂತೆ ಬೆಂಗಳೂರು ಸುತ್ತ ಮುತ್ತ ಮಳೆಯಾಗುತ್ತಿದೆ. ಹಾಗೆ ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆರಾಯನ ಅಬ್ಬರ ಇನ್ನಷ್ಟು ಮುಂದುವರೆಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಸೇರಿ ಹಲವೆಡೆ ಮಳೆಯಾಗಲಿದೆ. ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಎರಡು ದಿನ ಗುಡುಗು ಸಹಿತ ಮಳೆಯಾಗಲಿದ್ದು, ಹಬ್ಬದ ಸಂಭ್ರಮಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆಗಳಿವೆ. ಸಿಲಿಕಾನ್ ಸಿಟಿಯಲ್ಲಿ ಮುಂಜಾನೆ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದೆ. ಬೆಂಗಳೂರಲ್ಲಿ ಮಧ್ಯಾಹ್ನವೇ ಭಾರೀ ಮಳೆಯಾಗುತ್ತಿದೆ. ಇನ್ನೂ 2 ದಿನ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
– ಅಂತರ್ಜಾಲ ಮಾಹಿತಿ