ಹೆಬ್ಬಾವು ಕೊಂದು ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಕಟ್ಟಿದ ಆರೋಪಿಗಳು ವಶಕ್ಕೆ |

July 5, 2022
7:30 PM

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ  ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್  ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror