ಬೆಳ್ತಂಗಡಿ ತಾಲೂಕಿನ ಶಿಬಾಜೆ ರಕ್ಷಿತಾರಣ್ಯದ ಕಜೆ ಎಂಬಲ್ಲಿ ಅಕ್ರಮವಾಗಿ ಬಣ್ಪು ಮತ್ತು ಹೆಬ್ಬಲಸು ಮರ ಕಡಿತದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖಾ ಸಿಬಂದಿಗಳು ನಾಲ್ವರನ್ನು ಬಂಧಿಸಿದ್ದಾರೆ.
ಶಿಬಾಜೆ ಗ್ರಾಮದ ಕಜೆ ನಿವಾಸಿ ದಿನೇಶ್ (51) ಹಾಗೂ ಕಳೆಂಜ ಗ್ರಾಮದ ಕಾಯಡ ನಿವಾಸಿ ಜಿತೇಂದ್ರ (25)ಭಾನುವಾರ ಬಂಧಿಸಿ, ತಲೆ ಮರೆಸಿಕೊಂಡಿದ್ದ ಶಿಬಾಜೆಯ ಉಮೇಶ್ (35), ರೆಖ್ಯದ ವಿಜಯ್ (45)ನನ್ನು ಸೋಮವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯರಣ್ಯಾಧಿಕಾರಿ ಸಂತೋಷ್ ತಡ್ಲಗಿ ಹಾಗೂ ಅರಣ್ಯ ರಕ್ಷಕ ನಿಂಗಪ್ಪ ಅವಾರಿ, ಪ್ರಶಾಂತ್ ಮಾಳಗಿ, ರಸೂಲ್, ಸುನಿಲ್ ನಾಯಕ್, ಅರಣ್ಯ ವೀಕ್ಷಕ ದಾಮೋದರ್, ವಾಹನ ಚಾಲಕ ಕಿಶೋರ್ ಬಾಗಿಯಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಉಪ್ಪಿನಂಗಡಿ ವಲಯಾರಣ್ಯಾದಿಕಾರಿ ಎದುರು ಹಾಜರುಪಡಿಸಲಾಗಿದ್ದು, ಸ್ಥಳದ ಮಹಜರು ನಡೆಸಿ ವಲಯಾರಣ್ಯಾಧಿಕಾರಿ ಮಧುಸೂದನ್ ಮತ್ತು ಸಿಬ್ಬಂದಿ ವರ್ಗ ಮುಂದಿನ ಕ್ರಮ ಕೈಗೊಂಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel