ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಯಲ್ಲಿರುವ ಗ್ರಾಮ ಅರಣ್ಯ ಸಮಿತಿ ಕಟ್ಟಡದ ಬಾಗಿಲಿಗೆ ಹೆಬ್ಬಾವನ್ನು ಕೊಂದು ಕಟ್ಟಿ ಹಾಕಿದ ಪ್ರಕರಣ ಪತ್ತೆ ಹಚ್ಚಿ ಪುತ್ತೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಕೇಸು ದಾಖಲಿಸಿದ್ದಾರೆ. ಆರೋಪಿಗಳಾದ ಕೊಳ್ತಿಗೆ ಗ್ರಾಮದ ಶೇಡಿಗುರಿ ವಾಸಿ ಧನಂಜಯ(38 ) ಮತ್ತು ಜಯ(38 ) ರವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗಳಿಗೆ ಜುಲೈ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳು ಮನೆ ಬಳಿ ಬಂದಿದ್ದ ಹೆಬ್ಬಾವನ್ನು ಹಿಡಿದು ಕಟ್ಟಡದ ಬಾಗಿಲ ಬೀಗಕ್ಕೆ ಕಟ್ಟಿದ್ದು ಹಾವನ್ನು ಕೊಂದಿದ್ದರು. ಹೆಬ್ಭಾವನ್ನು ಕೊಲ್ಲುವುದು 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪ್ರಕಾರ ಜಾಮೀನು ರಹಿತ ಅಪರಾಧವಾಗುತ್ತದೆ. ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಯವರಾದ ದಿನೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಕಾರ್ಯಪ್ಪ ಅವರ ನಿರ್ದೇಶನದಂತೆ ವಲಯ ಅರಣ್ಯಾಧಿಕಾರಿಗಳಾದ ಕಿರಣ್ ಬಿ. ಎಮ್. ಉಪ ವಲಯ ಅರಣ್ಯಾಧಿಕಾರಿಗಳಾದ ಲೋಕೇಶ್ ಅರಣ್ಯ ರಕ್ಷಕರುಗಳಾದ ದೀಪಕ ,ನಿಂಗರಾಜ್ ಮತ್ತು ಇಲಾಖೆ ವಾಹನ ಚಾಲಕರಾದ ಜಗದೀಶ್ ಪಾಲ್ಗೊಂಡಿದ್ದರು. ತನಿಖೆ ಪ್ರಗತಿಯಲ್ಲಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹರಿಯಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…
ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು…
15.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಸ್ಮಾರ್ಟ್ ಕೃಷಿಯು ಕೃಷಿ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರುತ್ತಿದೆ. ತಂತ್ರಜ್ಞಾನ, ಯಾಂತ್ರೀಕರಣ ಮತ್ತು…
ಮಂಡ್ಯ ಮೈಷುಗರ್ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ಕಬ್ಬು ಅರೆಯುವ ಪ್ರಕ್ರಿಯೆ ಜೂನ್ 30ರಿಂದ…