ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11 ಕೋಟಿ 50 ಲಕ್ಷ ಸಸಿ ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವ ಗುರಿ ಹೊಂದಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಯಾದಗಿರಿಯಲ್ಲಿ ವನಮಹೋತ್ಸವ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ವರ್ಷ ಮೂರು ಕೋಟಿ ಸಸಿ ನೆಡಲಾಗುವುದು. ಅದರಲ್ಲಿ ಯಾದಗಿರಿ ಜಿಲ್ಲೆಯಲ್ಲಿ 4 ಲಕ್ಷ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ. ಮಕ್ಕಳಿಗೆ ಪರಿಸರ ಕಾಳಜಿ ಬಗ್ಗೆ ಜಾಗೃತಿ ಮೂಡಿಸಬೇಕು. ಮಣ್ಣಿನ ಗಣಪತಿಯನ್ನು ಪೂಜಿಸುವ ಮೂಲಕ ಪರಿಸರ ರಕ್ಷಣೆ ಮಾಡಬೇಕು ಎಂದು ಕರೆ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

