ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದೆ. ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗಲಿದೆ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿಯನ್ನು ಉಲ್ಲೇಖಿಸಿದ ಸಚಿವರು, ಅಡಿಕೆ ಬಗ್ಗೆ ಈ ವರದಿಯು…
ರಾಜ್ಯದಲ್ಲಿ 13 ಸಾವಿರದ 644 ಕೆರೆಗಳು ಒತ್ತುವರಿಯಾಗಿದ್ದು, ಈ ಪೈಕಿ 7 ಸಾವಿರದ…
ವಿಧಾನ ಸಭೆಯಿಂದ ಅಂಗೀಕೃತ ರೂಪದಲ್ಲಿರುವ 2025ನೇ ಸಾಲಿನ "ಕರ್ನಾಟಕ ಅಂತರ್ಜಲ ವಿನಿಮಯ ಹಾಗೂ…
ದೇಶದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಉತ್ತರಾಖಂಡ ಸೇರಿದಂತೆ…
ಆಗಸ್ಟ್ 25ರಂದು ಬಂಗಾಳಕೊಲ್ಲಿಯ ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿವೆ.
ಕರ್ನಾಟಕ ರಾಜ್ಯ ಕೈಗಾರಿಕಾ ನಿಗಮ ನಿಯಮಿತದ ಇ-ಕಾಮರ್ಸ್ ಅಂತರ್ಜಾಲ ತಾಣಕ್ಕೆ ಅರಣ್ಯ, ಜೀವಿಶಾಸ್ತ್ರ…