ರಾಜ್ಯದ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ-ಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ. ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗಲಿದೆ. ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ. ಅರಣ್ಯ ಸಂವರ್ಧನೆಯಾಗದಿದ್ದರೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗಲಿದೆ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ಸೂಚಿಸಿದ್ದಾರೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…