ಕುದುರೆಮುಖಿರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಅರಸಿನಮಕ್ಕಿಯಲ್ಲಿ ಕಳೆದ ಐದು ದಶಕದಿಂದಲೂ ಪಿ.ಟಿ.ಜೋಸೆಫ್ ಎಂಬವರನ್ನು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಒಕ್ಕಲೆಬ್ಬಿಸಿದ್ದು, ಮಾತ್ರವಲ್ಲದೆ ಅವರ ಮನೆಯನ್ನು ದ್ವಂಸಗೊಳಿಸಿರುವ ಘಟನೆಯು ನಡೆದಿದೆ.
ಜೋಸೆಫ್ ಅವರ ಕುಟುಂಬ ಕಳೆದ 50 ವರ್ಷಗಳಿಂದ ವಾಸವಿದ್ದ ಮನೆಯನ್ನು ನಾಶಪಡಿಸಲಾಗಿದ್ದು, ಮಾತ್ರವಲ್ಲದೆ ಸುಮಾರು ಎರಡು ಎಕರೆ ಜಾಗದಲ್ಲಿದ್ದ ಫಲಭರಿತ ಅಡಿಕೆಮರ, ತೆಂಗಿನಮರಗಳನ್ನು ಹಾಗೂ ಇತರ ಕೃಷಿಯನ್ನು ಪೂರ್ಣ ಕಡಿದುರುಳಿಸಲಾಗಿದ, ಹಾಗೂ ಅರಣ್ಯ ಗಿಡಗಳನ್ನು ನೆಡಲಾಗಿದೆ. ಆರಂಭದಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಹೊರ ಬರುವ ಕುಟುಂಬಗಳಿಗೆ ಪರಿಹಾರ ನೀಡಲಾಗುತ್ತಿತ್ತು. ಜಮೀನಿನ ದಾಖಲೆಗಳು ಇರದಿದ್ದರೂ ಕೃಷಿಗೆ ಹಾಗೂ ಮನೆಗೆ ಪರಿಹಾರ ನೀಡಿ ಹೊರಬರುವ ಕುಟುಂಬಕ್ಕೆ ಸಹಾಯಧನವನ್ನೂ ನೀಡಲಾಗುತ್ತಿತ್ತು. ಕೆಲವು ವರ್ಷಗಳಿಂದ ಪುನರ್ವಸತಿ ಪ್ಯಾಕೇಜ್ ಸ್ಥಗಿತಗೊಂಡಿದೆ. ಇದೀಗ ಯಾವ ಪರಿಹಾರಧನವೂ ನೀಡದೆ ಒಕ್ಕಲೆಬ್ಬಿಸುವ ಕಾರ್ಯ ಆರಂಭಿಸಿದ್ದಾರೆ ಎಂದು ಕೃಷಿಕರು ಆರೋಪಿಸಿದ್ದಾರೆ.
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…