ಅರಣ್ಯ ಒತ್ತುವರಿ ಪ್ರಕರಣಗಳಲ್ಲಿ ವಸ್ತುಸ್ಥಿತಿಯನ್ನು ಪರಿಶೀಲಿಸಿ ಮಾನವೀಯ ನೆಲೆಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾಂಡೇಲಿಯಲ್ಲಿ ಮಾತನಾಡಿದ ಅವರು, ಮೂರು ಎಕರೆಗಿಂತ ಕಡಿಮೆ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿರುವ ಕೃಷಿಕರು, ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟಸೂಚನೆ ನೀಡಲಾಗಿದೆ ಎಂದರು. ಹೋಂಸ್ಟೇ, ರೆಸಾರ್ಟ್‌ಗಳಿಗಾಗಿ ಹತ್ತಾರು ಎಕರೆ ಅರಣ್ಯ ಪ್ರದೇಶ ಒತ್ತುವರಿ ಮಾಡಿಕೊಂಡಿರುವವರಿಂದ ಕೂಡಲೇ ಯಾವುದೇ ಮುಲಾಜಿಲ್ಲದೇ, ಒತ್ತುವರಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕದಲ್ಲಿ …
ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…
ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …
ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…
ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…
ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…