ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 2 ಕಿಲೋ ಮೀಟರ್‌ಗಿಂತ ಹೆಚ್ಚಿನ ವ್ಯಾಪ್ತಿಯಲ್ಲಿ ಬೆಂಕಿ ಹರಡಿದೆ. ಮಾಹಿತಿ ಪಡೆದ ತಕ್ಷಣ ಅರಣ್ಯಾಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಅರಣ್ಯಾಧಿಕಾರಿಗಳ ಪ್ರಕಾರ, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ವ್ಯಾಪಿಸುವ ಆತಂಕ ಇದ್ದರೂ, ಹಲವೆಡೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಸಸ್ಯ ಸಂಕುಲ, ಪ್ರಾಣಿ ಹಾಗೂ ಪಕ್ಷಿಗಳು ನಾಶವಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕಾಡ್ಗಿಚ್ಚಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ




