ಚಾರ್ಮಾಡಿ ಘಾಟ್ ಅರಣ್ಯದಲ್ಲಿ ಕಾಡ್ಗಿಚ್ಚು- 2 ಕಿಮೀ ಪ್ರದೇಶಕ್ಕೆ ಬೆಂಕಿ ವ್ಯಾಪ್ತಿ

January 20, 2026
7:54 AM

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುಮಾರು 2 ಕಿಲೋ ಮೀಟರ್‌ಗಿಂತ ಹೆಚ್ಚಿನ ವ್ಯಾಪ್ತಿಯಲ್ಲಿ ಬೆಂಕಿ ಹರಡಿದೆ. ಮಾಹಿತಿ ಪಡೆದ ತಕ್ಷಣ ಅರಣ್ಯಾಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Advertisement

ಅರಣ್ಯಾಧಿಕಾರಿಗಳ ಪ್ರಕಾರ, ಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ವ್ಯಾಪಿಸುವ ಆತಂಕ ಇದ್ದರೂ, ಹಲವೆಡೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಈ ಕಾಡ್ಗಿಚ್ಚಿನಿಂದ ಅಪಾರ ಪ್ರಮಾಣದ ಸಸ್ಯ ಸಂಕುಲ, ಪ್ರಾಣಿ ಹಾಗೂ ಪಕ್ಷಿಗಳು ನಾಶವಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕಾಡ್ಗಿಚ್ಚಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror