ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಲ್ಲಾಳ ರಾಯನ ದುರ್ಗ ಅರಣ್ಯದಲ್ಲಿ ಕಾಡ್ಗಿಚ್ಚು ಉಂಟಾಗಿದ್ದು, ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ನಾಶ ಉಂಟಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. 20 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದ್ದು, ಎತ್ತರದ ಬೆಟ್ಟ ಪ್ರದೇಶ ಹಾಗು ರಸ್ತೆ ಸೌಲಭ್ಯವಿಲ್ಲದ ಸ್ಥಳವಾಗಿರುವ ಕಾರಣ, ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕದಳ ಸಿಬ್ಬಂದಿ ಸ್ಥಳಕ್ಕೆ ತೆರಳಿ, ಬೆಂಕಿ ನಂದಿಸುವುದಕ್ಕೆ ಸಮಸ್ಯೆ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ ಭಾಗಗಳಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel