ಬಿಸಿಲಿನ ತಾಪಕ್ಕೆ ಗುಡ್ಡ, ಬೆಟ್ಟ, ಕಾಡು, ಬಯಲು ಎಲ್ಲವು ಒಣಗಿ ನಿಂತಿದೆ. ಕೊಂಚ ಎಚ್ಚರ ತಪ್ಪಿದರೂ ಬೆಂಕಿ ತಗುಲಿದರೆ ಇಡೀ ಪ್ರದೇಶವೇ ಸುಟ್ಟು ಭಸ್ಮವಾಗುತ್ತದೆ. ಈಗಾಗಲೇ ಹಲವು ಕಡೆ ಬೆಂಕಿ ಅವಘಡ ನಡೆದಿದೆ. ಇದೀಗ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶವೂ ಭಾನುವಾರ ಹೊತ್ತಿ ಉರಿಯಲಾರಂಭಿಸಿದೆ. ಸಂಜೆಯ ವೇಳೆಗೆ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೊ ಅನಾಮಿಕರು ಹಾಕಿದ ಬೆಂಕಿಯಿಂದ ಅರಣ್ಯ ಉರಿಯುತ್ತಿದೆ ಎಂದು ಹೇಳಲಾಗಿದೆ.
ಈ ಗುಡ್ಡ ಮುಂದಕ್ಕೆ ಚಾರ್ಮಾಡಿ ಘಾಟಿಯನ್ನು ಹೊಂದಿಕೊಂಡಿದೆ. ಎತ್ತರ ಪ್ರದೇಶದ ಗುಡ್ಡದಲ್ಲಿ ವಿಪರೀತ ಬೆಂಕಿ ಹೊತ್ತಿ ಉರಿಯುತ್ತಿದೆ. ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗುತ್ತಿದೆ. ಗುಡ್ಡದಲ್ಲಿದ್ದ ಅಪಾರ ಸಂಖ್ಯೆಯ ಪ್ರಾಣಿ-ಪಕ್ಷಿಗಳು ಬೆಂಕಿಗೆ ಆಹುತಿಯಾಗುತ್ತಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ತಂಡ ದೌಡಾಯಿಸಿ, ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಅಧಿಕಾರಿಗಳಿಗೆ ಸ್ಥಳೀಯರು ಅಗ್ನಿ ದಮನಕ್ಕೆ ಸಾಥ್ ನೀಡುತ್ತಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟ ಸಾಧ್ಯವಾಗಿದೆ. ಅಗಾಧವಾದ ಮರ ಗಿಡಗಳು ಗುಡ್ಡದಲ್ಲಿ ಇರುವುದರಿಂದ ಬೆಂಕಿ ನಂದಿಸುವುದು ಅಷ್ಟು ಸುಲಭವಾದ ಕೆಲಸ ಅಲ್ಲ.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…