MIRROR FOCUS

ಡ್ಯಾಂಗಳ ರಕ್ಷಣೆಗಾಗಿ ಅಣೆಕಟ್ಟು ಸುರಕ್ಷತಾ ಸಮಿತಿ ರಚನೆ | ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಅಧ್ಯಯನ – ಡಿಸಿಎಂ ಡಿ.ಕೆ.ಶಿವಕುಮಾರ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತುಂಗಭ್ರದಾ ಡ್ಯಾಂ(Tungabhadra Dam) ದುರಂತ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ “ಅಣೆಕಟ್ಟು ಸುರಕ್ಷತಾ ಸಮಿತಿ(Dam safety committee) ರಚನೆ ಮಾಡಿದೆ. ಈ ಸಮಿತಿಯು ರಾಜ್ಯದ ಎಲ್ಲಾ ಅಣೆಕಟ್ಟುಗಳಿಗೆ ಭೇಟಿ ನೀಡಿ ಸುರಕ್ಷತೆಯ ಬಗ್ಗೆ ವರದಿ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್(DCM D K Shivakumar) ಅವರು ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಸಮಿತಿಯು ಎಲ್ಲಾ ಅಣೆಕಟ್ಟುಗಳ ಅಧ್ಯಯನ ನಡೆಸಿ ಮುಂದಿನ ಒಂದು ತಿಂಗಳ ಒಳಗಾಗಿ ವರದಿ ನೀಡುವುದು. ತುಂಗಾಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯಕ್ಕೂ ಈ ಸಮಿತಿಗೂ ಸಂಬಂಧವಿಲ್ಲ. ಉಳಿದ ವಿಚಾರದ ಬಗ್ಗೆ ವರದಿ ತಯಾರಿಸಲಾಗುವುದು” ಎಂದು ತಿಳಿಸಿದರು.

Advertisement
Advertisement

“ಈಗಾಗಲೇ ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕೆಲಸ ನಡೆಯುತ್ತಿದೆ. ತುಂಗಭದ್ರಾ ನೀರಾವರಿ ನಿಗಮ ನಮ್ಮೊಬ್ಬರ ಅಧಿಕಾರ ವ್ಯಾಪ್ತಿಯಲ್ಲಿ ಬರುವುದಿಲ್ಲ.ಕೇಂದ್ರ ಹಾಗೂ ಮೂರು ರಾಜ್ಯಗಳ ಸದಸ್ಯರು ಇದರಲ್ಲಿ ಇರುತ್ತಾರೆ. ಗೇಟ್ ಚೈನ್ ಕಿತ್ತು ಹೋದ ಪ್ರಕರಣದ ಬಗ್ಗೆ ಎಲ್ಲರಿಗೂ ತಕ್ಷಣ ಮಾಹಿತಿ ನೀಡಲಾಯಿತು. ಅಣೆಕಟ್ಟು ಸುರಕ್ಷತಾ ಸಮಿತಿಯಲ್ಲಿ ಈ ಮೊದಲೇ ಕೆಲಸ ಮಾಡಿದಂತಹ ತಂತ್ರಜ್ಞರು ಇದ್ದರು. ಅವರ ಬಳಿ ಚರ್ಚೆ ನಡೆಸಲಾಯಿತು. ನಂತರ ನಕ್ಷೆಯನ್ನು ತೆಗೆಸಿ ಅದರಂತೆ ಗೇಟ್ ತಯಾರಿಸುವವರ ಬಳಿ ಮಾತನಾಡಲಾಯಿತು. ನಾನೇ ಖುದ್ದಾಗಿ ಜಿಂದಾಲ್ ಕಾರ್ಖಾನೆಯವರ ಬಳಿ ಮಾತನಾಡಿದೆ. ಸೋಮವಾರ ಬೆಳಗಿನ ಜಾವದ ಹೊತ್ತಿಗೆ ಸಂಪೂರ್ಣ ತಂಡ ಬಂದು ಕೆಲಸ ಪ್ರಾರಂಭ ಮಾಡಿದೆ. 50-60 ಟಿಎಂಸಿ ನೀರನ್ನು ಉಳಿಸಲು, ರೈತರಿಗೆ ಒಂದು ಬೆಳೆಗಾದರೂ ನೀರು ಕೊಡಲು ನಾವು ಕೆಲಸ ಮಾಡುತ್ತಿದ್ದೇವೆ” ಎಂದರು.

“ರೈತರು ಆತಂಕ ಪಡಬೇಕಾಗಿಡಲ್ಲ. ನದಿಗೆ ನೀರು ಹರಿದು ಹೋಗುವ ಬದಲು ಎಲ್ಲಾ ಚಾನಲ್ ಗಳನ್ನು ತೆರೆದು ಅಲ್ಲಿಗೂ ನೀರು ಹರಿಸಲಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಮುಂಜಾಗ್ರತ ಕ್ರಮವಾಗಿ ಸುರಕ್ಷತೆವಹಿಸಲಾಗಿದೆ. ಆಂಧ್ರ, ತೆಲಂಗಾಣ ಹಾಗೂ ವಿರೋಧ ಪಕ್ಷದ ನಾಯಕರು ಭೇಟಿ ನೀಡುತ್ತೇವೆ ಎಂದು ತಿಳಿಸಿದ್ದರು. ಅವರಿಗೆ ಮಾಹಿತಿ ನೀಡಿ ಎಂದು ಅಧಿಕಾರಿಗಳಿಗೆ ತಿಳಿಸಿದ್ದೆ. ಅಲ್ಲದೇ ಕೇಂದ್ರ ಜಲಶಕ್ತಿ ಸಚಿವರು ಹಾಗೂ ಕೇಂದ್ರ ಸಚಿವರಾದ ಸೋಮಣ್ಣ ಅವರ ಬಳಿಯೂ ಮಾತನಾಡಿ ವರದಿ ಕಳಿಸಲಾಗಿದೆ” ಎಂದು ಹೇಳಿದರು.

“ತುಂಗಭದ್ರಾ ನೀರಾವರಿ ನಿಗಮದ ಅಧ್ಯಕ್ಷರಾದ ವೀರೇಂದ್ರ ಶರ್ಮ ಅವರಿಗೆ ಪತ್ರ ಬರೆಯಲಾಗಿದೆ. ಅದರಲ್ಲಿ ಪ್ರಸ್ತುತ ವಿಚಾರಗಳ ಬಗ್ಗೆ ತಿಳಿಸಲಾಗಿದೆ. ಮುಂದಕ್ಕೆ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಹೇಳಲಾಗಿದೆ” ಎಂದರು. ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತೇ, ಇದರಲ್ಲಿ ಅಧಿಕಾರಿಗಳ ಲೋಪವಿದೆಯೇ ಎಂದು ಕೇಳಿದಾಗ “70 ವರ್ಷದ ಹಳೆಯ ತಂತ್ರಜ್ಞಾನ. ಎಲ್ಲಾ ಗೇಟ್ ಗಳು ಸರಿಯಿವೆ. ಇದೊಂದು ಮಾತ್ರ ಒತ್ತಡ ತಡೆಯಲಾರದೆ ಅವಘಡ ಸಂಭವಿಸಿದೆ. ಇದರಲ್ಲಿ ಅಧಿಕಾರಿಗಳ ತಪ್ಪೇನಿದೆ?” ಎಂದರು.

“ಈಗ ಒಬ್ಬರನ್ನೊಬ್ಬರು ದೂಷಣೆ ಮಾಡುವಂತಹ ಸಮಯವಲ್ಲ. ನೀರು ಹಾಗೂ ಅಣೆಕಟ್ಟು ಎರಡೂ ಉಳಿಯಬೇಕು. 70 ವರ್ಷದ ಹಳೆಯ ಅಣೆಕಟ್ಟಾದ ಕಾರಣ ಈ ಅವಘಡ ನಡೆದಿದೆ. ನಮ್ಮ ಬಳಿ ಎಲ್ಲಾ ನಕ್ಷೆ, ದಾಖಲೆಗಳು ಇದ್ದ ಕಾರಣಕ್ಕೆ ಬೇಗ ಕೆಲಸವಾಗುತ್ತಿದೆ” ಎಂದು ತಿಳಿಸಿದರು. ಅಣೆಕಟ್ಟು ಸುರಕ್ಷತಾ ಸಮಿತಿ ಈ ಮೊದಲೇ ವರದಿ ನೀಡಿತ್ತು ಎನ್ನುವ ಬಗ್ಗೆ ಕೇಳಿದಾಗ “ಎಲ್ಲವೂ ಸುಳ್ಳು. ಯಾವ ವರದಿಯೂ ಬಂದಿಲ್ಲ. ಇತರೇ ಅಣೆಕಟ್ಟುಗಳಲ್ಲಿ ಎರಡು ರೀತಿಯ ನಿಯಂತ್ರಣ ವ್ಯವಸ್ಥೆಯಿರುತ್ತದೆ. ರೋಪ್ ಹಾಗೂ ಚೈನ್ ವ್ಯವಸ್ಥೆ. ಆಗಿನ ಕಾಲಸ ವಿನ್ಯಾಸದಂತೆ ಇಲ್ಲಿ ಚೈನ್ ವ್ಯವಸ್ಥೆ ಮಾತ್ರವಿತ್ತು” ಎಂದರು.

Advertisement

ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ನಾಯಕರ ಆರೋಪದ ಬಗ್ಗೆ ಕೇಳಿದಾಗ “ನನ್ನನ್ನು, ಮುಖ್ಯಮಂತ್ರಿಗಳನ್ನು ಹಾಗೂ ಅಧಿಕಾರಿಗಳನ್ನು ಎಲ್ಲರನ್ನು ವಿರೋಧ ಪಕ್ಷದವರು ಬೈದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಮಗೆ ಮೊದಲು ಅಣೆಕಟ್ಟು ಹಾಗೂ ರೈತರನ್ನು ಉಳಿಸುವುದು ಮುಖ್ಯ. ಅವರು ರಾಜಕಾರಣ ಮಾಡಲಿ” ಎಂದರು. “ನೀರು ಕಡಿಮೆಯಾಗುವ ತನಕ ದುರಸ್ತಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ “ನೀರಿನ ಹೊರಹರಿವು ಹೆಚ್ಚು ರಭಸದಿಂದ ಕೂಡಿದೆ. ಕೇವಲ 19 ನೇ ಗೇಟ್ ಒಂದರಲ್ಲೇ 9 ಸಾವಿರ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರು ಹೋಗುತ್ತಿದೆ. ನೀರಿನ ರಭಸ ಎಷ್ಟಿದೆ ಎಂದು ತಿಳಿಯಲು ಡ್ರೋಣ್ ಕ್ಯಾಮೆರಾ ಮೂಲಕ ಚಿತ್ರೀಕರಿಸಲಾಗುತ್ತಿದೆ. ಕೂಡಲೇ ಆ ವಿಡಿಯೋ ಬಿಡುಗಡೆ ಮಾಡಲಾಗುವುದು. ಬೇರೆ ಗೇಟ್ ಗಳಿಗೆ ತೊಂದರೆ ಆಗದಂತೆ ಕೆಲಸ ಮಾಡಲಾಗುವುದು. ಮತ್ತೊಬ್ಬರು, ವಿರೋಧ ಪಕ್ಷದವರು ಹೇಳಿದಂತೆ ಕೆಲಸ ಮಾಡಲು ಆಗುವುದಿಲ್ಲ. ತಂತ್ರಜ್ಞರ ತಂಡದ ಸಲಹೆಯಂತೆ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

5 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

6 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

6 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

6 hours ago