ಕಳೆದ ವಿಧಾನ ಸಭೆ ಚುನಾವಣೆ(Vidhana sabha Election) ಸಂದರ್ಭದಲ್ಲಿ ಮಾಜಿ ಮುಖ್ಯಮಮಂತ್ರಿ ಜಗದೀಶ್ ಶೆಟ್ಟರ್(Jagadish Shettar) ಟಿಕೇಟ್(Ticket) ವಿಚಾರದಲ್ಲಿ ಮುನಿಸಿಕೊಂಡು ಬಿಜೆಪಿ ಪಕ್ಷವನ್ನು(BJP) ತೊರೆದು ಕಾಂಗ್ರೆಸ್(Congress) ಪಕ್ಷದ ಕೈ ಹಿಡಿದಿದ್ದರು. ಇದೀಗ ಶೆಟ್ಟರ್ ಮತ್ತೆ ಮರಳಿ ಗೂಡಿಗೆ ಬರಲು ಮನಸ್ಸು ಮಾಡಿದ್ದಾರೆ. ದೆಹಲಿಯಲ್ಲಿ(Delhi) ಕೇಂದ್ರ ಗೃಹ ಸಚಿವ(Home Minister) ಅಮಿತ್ ಶಾ(Amit Sha) ಭೇಟಿ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಪ್ರಕಟಿಸಿದರು.
ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಬಿಜೆಪಿ ಸೇರ್ಪಡೆಯ ಘೋಷಣೆ ಮಾಡಿರುವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಹೇಳಿದ್ದಾರೆ.ಇಂದು ಸಂಜೆ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆಗಳಿವೆ.
2023ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದಾಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.ಇನ್ನು ವಿಧಾನಸಭಾ ಚುನಾವಣೆ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ನಿಂದ ಸ್ಪರ್ಧಿಸಿ ಶಾಸಕರಾಗಿ ಗೆದ್ದಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಕಮಲ ಮನೆ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದಾರೆ. ಜಗದೀಶ್ ಶೆಟ್ಟರ್ ಏಪ್ರಿಲ್ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಲಿಂಗಾಯತ ಮತಗಳನ್ನು ಸೆಳೆಯಲು ಕೈ ಪಕ್ಷ ಯಶಸ್ವಿಯಾಗಿತ್ತು.
– ಅಂತರ್ಜಾಲ ಮಾಹಿತಿ