Advertisement
MIRROR FOCUS

ಮರಳಿ ಗೂಡು ಸೇರಿದ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ | ಕಾಂಗ್ರೆಸ್​ಗೆ ಗುಡ್​ ಬೈ

Share

ಕಳೆದ ವಿಧಾನ ಸಭೆ ಚುನಾವಣೆ(Vidhana sabha Election) ಸಂದರ್ಭದಲ್ಲಿ ಮಾಜಿ ಮುಖ್ಯಮಮಂತ್ರಿ ಜಗದೀಶ್‌ ಶೆಟ್ಟರ್‌(Jagadish Shettar) ಟಿಕೇಟ್‌(Ticket) ವಿಚಾರದಲ್ಲಿ ಮುನಿಸಿಕೊಂಡು ಬಿಜೆಪಿ ಪಕ್ಷವನ್ನು(BJP) ತೊರೆದು ಕಾಂಗ್ರೆಸ್‌(Congress) ಪಕ್ಷದ ಕೈ ಹಿಡಿದಿದ್ದರು. ಇದೀಗ ಶೆಟ್ಟರ್‌ ಮತ್ತೆ ಮರಳಿ ಗೂಡಿಗೆ ಬರಲು ಮನಸ್ಸು ಮಾಡಿದ್ದಾರೆ.  ದೆಹಲಿಯಲ್ಲಿ(Delhi) ಕೇಂದ್ರ ಗೃಹ ಸಚಿವ(Home Minister) ಅಮಿತ್ ಶಾ(Amit Sha) ಭೇಟಿ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆಯುವ ನಿರ್ಧಾರವನ್ನು ಪ್ರಕಟಿಸಿದರು.

Advertisement
Advertisement

ಇಂದು ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಜೊತೆಯಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿ ಸುದೀರ್ಘವಾದ ಚರ್ಚೆ ನಡೆಸಿದರು. ಬಿಜೆಪಿ ಸೇರ್ಪಡೆಯ ಘೋಷಣೆ ಮಾಡಿರುವ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಹೇಳಿದ್ದಾರೆ.ಇಂದು ಸಂಜೆ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ಬೆಂಗಳೂರಿಗೆ ಹಿಂದಿರುಗುವ ಸಾಧ್ಯತೆಗಳಿವೆ.

Advertisement

2023ರ ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ್ದಾಗ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಾಗಿದ್ರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದರು.ಇನ್ನು ವಿಧಾನಸಭಾ ಚುನಾವಣೆ ವೇಳೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹ ಬಿಜೆಪಿ ತೊರೆದು  ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಶಾಸಕರಾಗಿ ಗೆದ್ದಿದ್ದಾರೆ.

Advertisement

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಕಮಲ ಮನೆ ಸೇರ್ಪಡೆಯಾದರು. ಜಗದೀಶ್ ಶೆಟ್ಟರ್ ಮನವೊಲಿಸುವಲ್ಲಿ ಅಮಿತ್ ಶಾ ಯಶಸ್ವಿಯಾಗಿದ್ದಾರೆ. ಜಗದೀಶ್ ಶೆಟ್ಟರ್ ಏಪ್ರಿಲ್​​ನಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಲಿಂಗಾಯತ ಮತಗಳನ್ನು ಸೆಳೆಯಲು ಕೈ ಪಕ್ಷ ಯಶಸ್ವಿಯಾಗಿತ್ತು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಶ್ವ ಬಿದಿರು ದಿನವನ್ನು ಆಚರಿಸಿದ ನಾಗಾಲ್ಯಾಂಡ್‌ | ಬಿದಿರು ಕೈಗಾರಿಕಾ ಘಟಕಗಳನ್ನು ಸ್ಥಾಪಿಸಲು ಯೋಜಿಸಿದ ನಾಗಾಲ್ಯಾಂಡ್‌ |

ನಾಗಾಲ್ಯಾಂಡ್‌ನಲ್ಲಿ ಕೂಡಾ ಬಿದಿರು ಕೃಷಿಯ ಬಗ್ಗೆ ಗಮನಹರಿಸಲಾಗಿದೆ. ಇದೀಗ ವಿಶ್ವ ಬಿದಿರು ದಿನದ…

14 hours ago

ರೈತರಿಗೆ ₹ 21,000 ಕೋಟಿ ನೆರವು | 100 ಹೊಸ ಕೃಷಿ ವಿಧಾನಗಳ ಅಭಿವೃದ್ಧಿ |

ಕೇಂದ್ರ ಸರ್ಕಾರದ 100 ದಿನಗಳಲ್ಲಿ ಕೃಷಿ ಸಚಿವಾಲಯದಲ್ಲಿ  ಸಾಧನೆಗಳ ಬಗ್ಗೆ ಕೇಂದ್ರ ಕೃಷಿ…

14 hours ago

ದೇಶದಲ್ಲಿ ಸಹಕಾರಿ ವಲಯ ಬಲಗೊಳ್ಳುತ್ತಿದೆ | ಕೇಂದ್ರ ಸಹಕಾರ ಸಚಿವ ಅಮಿತ್‌ ಶಾ |

ದೇಶದ ಎಲ್ಲ ಗ್ರಾಮಗಳು ಮತ್ತು ಜಿಲ್ಲೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಮರುಜನ್ಮ ನೀಡುವ ಗುರಿಯೊಂದಿಗೆ…

14 hours ago

ಕೃಷಿ ಕ್ಷೇತ್ರದ ಪ್ರಗತಿಗೆ ಆದ್ಯತೆ | ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ |

ಕೃಷಿ ವಲಯವನ್ನು ಜಾಗತಿಕವಾಗಿ ಅಭಿವೃದ್ಧಿಗೊಳಿಸಬೇಕಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ  ಗಿರಿರಾಜ್ ಸಿಂಗ್…

15 hours ago

ಹವಾಮಾನ ವರದಿ | 20-09-2024 | ಸೆ.23 ರಿಂದ ಕೆಲವು ಕಡೆ ಹೆಚ್ಚು ಮಳೆ ನಿರೀಕ್ಷೆ |

ಸೆ.23 ರಿಂದ ರಾಜ್ಯದ ಕೆಲವು ಕಡೆ ಮಳೆ ಹೆಚ್ಚಾಗುವ ನಿರೀಕ್ಷೆ ಇದೆ.

23 hours ago

ಗ್ರಾಮಗಳಲ್ಲಿ ನೀರಿನ ಹೊಂಡ | ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ ವಿಶ್ವಬ್ಯಾಂಕ್ ನೆರವಿನ ಯೋಜನೆ ಅನುಷ್ಟಾನ |

ಚಿತ್ರದುರ್ಗ ಜಿಲ್ಲೆಯ 7 ಹಳ್ಳಿಗಳಲ್ಲಿ 5 ಸಾವಿರದ 171 ಹೆಕ್ಟೇರ್ ಪ್ರದೇಶದಲ್ಲಿ ಯೋಜನೆ…

2 days ago