Advertisement

ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಗೊಂಡ ಜಗದೀಶ್‌ ಶೆಟ್ಟರ್‌

Share

ಸಾಕಷ್ಟು ರಾಜಕೀಯ ಹೈಡ್ರಾಮಾಗಳ ನಡುವೆ ಕೊನೆಗೂ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಇಂದು ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು. ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌  ನಾಯಕರ ಸಮ್ಮುಖದಲ್ಲಿ ‘ಕೈ’ ಹಿಡಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ  ಸುದ್ದಿಗೋಷ್ಠಿಯಲ್ಲಿ ಶೆಟ್ಟರ್‌ ಕಾಂಗ್ರೆಸ್‌ ಸೇರಿದರು. ಮಲ್ಲಿಕಾರ್ಜುನ ಖರ್ಗೆ ಅವರು ಶೆಟ್ಟರ್‌ಗೆ ಪಕ್ಷದ ಶಾಲು ಹೊದಿಸಿ, ಬಾವುಟ ನೀಡಿ  ಪಕ್ಷಕ್ಕೆ ಸ್ವಾಗತಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಬಿಜೆಪಿ ಟಿಕೆಟ್‌ ನೀಡದ್ದಕ್ಕೆ ಶೆಟ್ಟರ್‌ ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದರು. ಬಿಜೆಪಿ ಹಿರಿಯ ನಾಯಕರು ಮನವೊಲಿಸಲು ಎಷ್ಟೇ ಪ್ರಯತ್ನ ಮಾಡಿದರೂ ಹಠ ಬಿಡಲಿಲ್ಲ. ಕೊನೆಗೆ ಭಾನುವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ನಂತರ ಬೆಂಗಳೂರಿಗೆ ಆಗಮಿಸಿದ್ದ ಶೆಟ್ಟರ್‌ರನ್ನು ಕಾಂಗ್ರೆಸ್‌ ನಾಯಕರು ತಡರಾತ್ರಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು. ಕಾಂಗ್ರೆಸ್‌ ಸೇರುವಂತೆ ಮನವೊಲಿಸಿದರು. ಈ ಎಲ್ಲಾ ಬೆಳವಣಿಗೆಯು ಶೆಟ್ಟರ್‌ ಕಾಂಗ್ರೆಸ್‌ ಸೇರುವುದು ಪಕ್ಕಾ ಎಂಬಂತಿತ್ತು.

 

ಸೋಮವಾರ ಬೆಳಗ್ಗೆ ಲಿಂಗಾಯತ ಸಮುದಾಯದ ನಾಯಕರೇ ಆಗ ಎಂ.ಬಿ.ಪಾಟೀಲ್‌ ಅವರು ಸ್ಕೈ ಗಾರ್ಡನ್‌ ಅಪಾರ್ಟ್‌ಮೆಂಟ್‌ಗೆ ತೆರಳಿ ಶೆಟ್ಟರ್‌ ಅವರನ್ನು ತಮ್ಮ ವಾಹನದಲ್ಲಿ ಕೆಪಿಸಿಸಿ ಕಚೇರಿಗೆ ಕರೆತಂದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.

ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಅನೇಕ ನಾಯಕರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

6 hours ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

11 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago