ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 4.15 ಲಕ್ಷ ರೂ. ಗುಳುಂ…! |

January 27, 2023
10:05 PM

ಮೊಬೈಲ್ ಗೆ ಬಂದ ಪ್ಯಾನ್ ಅಪ್ಡೇಟ್ ಲಿಂಕ್ ಕ್ಲಿಕ್ ಮಾಡಿದ ದಾವಣಗೆರೆಯ ವ್ಯಕ್ತಿಯೊಬ್ಬರು 4.15 ಲಕ್ಷ ರೂ. ಕಳೆದುಕೊಂಡಿದ್ದಾರೆ. ಜನವರಿ 21ರಂದು ಘಟನೆ ನಡೆದಿದ್ದು, ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.

Advertisement
Advertisement

ದಾವಣಗೆರೆಯ ದೇವರಾಜ ಅರಸು ಬಡಾವಣೆ ನಿವಾಸಿಯಾಗಿರುವ ವಿರೂಪಾಕ್ಷಪ್ಪ ವಂಚನೆಗೆ ಒಳಗಾದವರು. ಎಸ್.ಬಿ.ಐ. ನಲ್ಲಿ ಅವರು ಖಾತೆ ಹೊಂದಿದ್ದು, ಅವರ ಮೊಬೈಲ್ ಸಂಖ್ಯೆಗೆ ಜನವರಿ 21ರಂದು ರಾತ್ರಿ 10 ಗಂಟೆ ಸುಮಾರಿಗೆ ಎಸ್‌ಎಂಎಸ್ ಬಂದಿದೆ.ಎಸ್‌ಬಿಐ ಯೋನೋ ಅಪ್ಲಿಕೇಷನ್ ನಲ್ಲಿ ಪ್ಯಾನ್ ಅಪ್ ಡೇಟ್ ಮಾಡಲು ಲಿಂಕ್ ಒತ್ತಿ ಎಂದು ಅದರಲ್ಲಿ ತಿಳಿಸಲಾಗಿದ್ದು, ಲಿಂಕ್ ಕ್ಲಿಕ್ ಮಾಡಿದ ವಿರೂಪಾಕ್ಷಪ್ಪ ತಮ್ಮ ಖಾತೆಯ ಕುರಿತಾದ ಯಾವುದೇ ವಿವರ ನಮೂದಿಸಿಲ್ಲವಾದರೂ ಮರುದಿನ ಮಧ್ಯಾಹ್ನ ಅವರ ಖಾತೆಯಿಂದ ಹಣ ಕಡಿತವಾದ ಸಂದೇಶ ಮೊಬೈಲ್ ಗೆ ಬಂದಿದೆ.

ಕೂಡಲೇ ಅವರು ಬ್ಯಾಂಕಿಗೆ ಹೋಗಿ ವಿಚಾರಿಸಿದಾಗ ಅವರ ಖಾತೆಯಿಂದ ಕ್ರಮವಾಗಿ 1.35 ಲಕ್ಷ ರೂ., 1 ಲಕ್ಷ ರೂ., 1.79 ಲಕ್ಷ ರೂ. ಸೇರಿದಂತೆ ಒಟ್ಟು 4.15 ಲಕ್ಷ ರೂ. ಕಡಿತವಾಗಿರುವುದಾಗಿ ಬ್ಯಾಂಕ್ ಸಿಬ್ಬಂದಿ ತಿಳಿಸಿದ್ದಾರೆ. ಬಳಿಕ ವಿರೂಪಾಕ್ಷಪ್ಪ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror