ಉಪ್ಪು ತಿಂದವರು ನೀರು ಕುಡಿಲೇ ಬೇಕು. ಈ ಪರಿಸ್ಥಿತಿ ಈಗ ಚೈತ್ರ ಕುಂದಾಪುರ#Chaitra Kundapura ಹಾಗೂ ಆಕೆಯ ವಂಚನೆ ಗ್ಯಾಂಗ್ ಪರಿಸ್ಥಿತಿ. ಮೊನ್ನೆಯಿಂದ ಸಿಸಿಬಿ ಪೋಲಿಸ#CCB Policeರಿಂದ ಡ್ರಿಲ್ ಮಾಡಿಸಿಕೊಳ್ಳುತ್ತಿರುವ ಗ್ಯಾಂಗ್ ಇಂದು ಮತ್ತೆ ಕೋರ್ಟ್#Court ಗೆ ಹಾಜರಾಗಲಿದ್ದಾರೆ. ಚೈತ್ರಾ ಕುಂದಾಪುರ & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ ಹಾಜರುಪಡಿಸಲಿದ್ದಾರೆ.
ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ. ಕೋರ್ಟ್ ಕೇಸ್ ಕೈಗೆತ್ತಿಕೊಂಡು ತೀರ್ಪು ನೀಡಿದ ಮೇಲೆ ಅಷ್ಟೇ ತಿಳಿಬೇಕು ಈ ಗ್ಯಾಂಗ್ ಮತ್ತೆ ಕಸ್ಟಡಿಗಾ..? ಅಥವಾ ಮತ್ತೆ ಜೈಲಿಗಾ ಅಂತ.
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…