ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಉಚಿತ ಬಸ್ ಪಾಸ್ ವಿತರಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಕಟ್ಟಡ ಕಾರ್ಮಿಕರ ಕೂಲಿ ಉಳಿತಾಯಕ್ಕಾಗಿ ಉಚಿತ ಪಾಸ್ ವಿತರಿಸಲು ಚಿಂತಿಸಲಾಗಿದೆ. ಇದೀಗ 1 ಲಕ್ಷ ಉಚಿತ ಪಾಸ್ ವಿತರಿಸಲು ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಇನ್ನುಳಿದಂತೆ ರಾಜ್ಯದಲ್ಲಿರುವ ಒಟ್ಟು 37 ಲಕ್ಷ ಕಟ್ಟಡ ಕಾರ್ಮಿಕರಿಗೆ ಹಂತ ಹಂತವಾಗಿ ಪಾಸ್ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಮುಂದಿನ ತಿಂಗಳೊಳಗೆ ಮೊದಲ ಹಂತದಲ್ಲಿ 50 ಎಲೆಕ್ಟ್ರಿಕ್ ಬಸ್‍ಗಳ ಸಂಚಾರ ಆರಂಭಿಸಲಾಗುವುದು. 450 ನೂತನ ಬಸ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಅವುಗಳಲ್ಲಿ ಅತ್ಯುತ್ತಮ ಸೌಲಭ್ಯವಿರುವ 50 ವೋಲ್ವೋ ಹಾಗೂ ಎಲೆಕ್ಟ್ರಿಕಲ್ ಬಸ್‍ಗಳಿರಲಿವೆ. ಒಂದು ತಿಂಗಳಿನೊಳಗೆ ರಾಜ್ಯದಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್‍ಗಳು ಓಡಾಡಲಿವೆ ಎಂದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…