ದೇಶದ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ತಿಂಗಳು ಉಚಿತ ಆಹಾರ ಧಾನ್ಯವನ್ನು ಕೇಂದ್ರ ವಿತರಿಸುತ್ತಿದ್ದು, ಇದಕ್ಕಾಗಿ 2 ಲಕ್ಷ 11 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳು ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ಪ್ರಲ್ಹಾದ್ ಜೋಶಿ ಲೋಕಸಭೆಯಲ್ಲಿ ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಅವರು, ಈ ಯೋಜನೆ ಕೇಂದ್ರ ಮತ್ತು ರಾಜ್ಯಗಳ ಜಂಟಿ ಜವಾಬ್ದಾರಿಯ ಕಾರ್ಯಕ್ರಮವಾಗಿದ್ದು, ವಿವಿಧ ವರ್ಗಗಳ ರಾಜ್ಯಗಳಿಗೆ ಶೇಕಡಾ 50, ಶೇಕಡಾ 75 ಹಾಗೂ ಶೇಕಡಾ 90 ರಷ್ಟು ನೆರವನ್ನು ಕೇಂದ್ರ ಸರ್ಕಾರ ಒದಗಿಸುತ್ತಿದೆ. ಧಾನ್ಯಗಳ ಖರೀದಿ, ರಾಜ್ಯಗಳ ಗೋದಾಮುಗಳಿಗೆ ಪೂರೈಕೆ, ಅಂತಾರಾಜ್ಯ ಸರಬರಾಜು ಕಾರ್ಯಗಳನ್ನು ಕೇಂದ್ರ ನಿಭಾಯಿಸುತ್ತಿದೆ ಎಂದು ತಿಳಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel