ಕುರಿ- ಮೇಕೆ ಸಾಕಾಣಿಕೆಯು ಅತ್ಯಂತ ಲಾಭದಾಯಕವಾಗಿ ಮುಂದುವರಿಯುತ್ತಿದ್ದರೂ. ಎಷ್ಟೋ ಜನರಿಗೆ ಆದರ ಬಗ್ಗೆ ಸರಿಯಾದ ಮಾಹಿತಿಗಳು ಸಿಗುತ್ತಿಲ್ಲ. ಇದಕ್ಕಾಗಿಯೇ, ವೈಜ್ಞಾನಿಕ ರೀತಿಯಲ್ಲಿ ಸಾಕಾಣಿಕೆ ಹೇಗೆ ಮಾಡಬೇಕು ಎಂಬುದನ್ನು ತರಬೇತಿಯನ್ನು ನೀಡಲು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಂಪೂರ್ಣ ಉಚಿತ ತರಬೇತಿಯನ್ನು ಆಯೋಜಿಸಿದೆ.
ಉಚಿತ ತರಬೇತಿಯು 2026 ರ ಜನವರಿ 19 ರಿಂದ ಪ್ರಾರಂಭವಾಗಿ ಒಟ್ಟು 13 ದಿನಗಳ ಕಾಲ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಕೇಂದ್ರ, ಸೊಣಹಳ್ಳಿಪುರ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆಯಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ರೇಷನ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್
• ಪಾಸ್ಫೋಟ್ ಅಳತೆಯ ಫೋಟೋ
ಕುರಿ-ಮೇಕೆ ಸಾಕಾಣಿಕೆಗೆ ಸಿಗುವ ಭರ್ಜರಿ ಯೋಜನೆಗಳು: ತರಬೇತಿ ಪಡೆದ ನಂತರ ಉದ್ಯಮ ಆರಂಭಿಸಲು ಹಣಕಾಸಿನ ಚಿಂತೆ ಬೇಡ. ಏಕೆಂದರೆ ಈ ಬ್ಯಾಂಕ್ ಹಲವಾರು ಯೋಜನೆಗಳನ್ನು ಆರಂಭಿಸುತ್ತಿದೆ.
*ರಾಷ್ಟ್ರೀಯ ಜಾನುವಾರು ಮಿಷನ್ (NLM): ಕುರಿ ಸಾಕಾಣಿಕೆ ಆರಂಭಿಸಲು ಬರೋಬ್ಬರಿ ರೂ 25 ಲಕ್ಷದವರೆಗೆ ಶೇ. 50% ರಷ್ಟು ಸಬ್ಸಿಡಿ ಸಿಗುತ್ತದೆ.
* ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: 20ಕುರಿ+1 ಮೇಕೆ ಘಟಕಕ್ಕೆ ಒಟ್ಟು ರೂ.1.75 ಲಕ್ಷ ವೆಚ್ಚದಲ್ಲಿ ಸರ್ಕಾರದಿಂದ ರೂ.43,750 ಸಹಾಯಧನ ಮತ್ತು ಕಡಿಮೆ ಬಡ್ಡಿದರದಲ್ಲಿ ರೂ87,500 ಸಾಲ ಸೌಲಭ್ಯವಿದೆ.
* ನರೇಗಾ ಯೋಜನೆ (NREGA): ಕುರಿಗ ಶೆಡ್ ನಿರ್ಮಾಣಕ್ಕೆ ರೂ68,000 ವರೆಗೆ ಆರ್ಥಿಕ ನೆರವು ಪಡೆಯಬಹುದು.
* ಇತರೆ ಯೋಜನೆಗಳು: ಡಾ.ಬಿಆರ್ ಅಂಬೇಡ್ಕರ್ ಅಭಿವೃದ್ದಿ ನಗಮದಿಂದ ಪರಿಶಿಷ್ಟ ಜಾತಿಯ ರೈತರಿಗೆ ಶೇ.50% ಸಬ್ಸಿಡಿ ಹಾಗೂ ಸಹಕಾರ ಸಂಘಗಳ ಮೂಲಕವೂ ಸಾಲ ಸೌಲಭ್ಯಗಳು ಲಭ್ಯವಿದೆ.
ನೋಂದಾಯಿಸಿಕೊಳ್ಳುವ ವಿಧಾನ: ಆಸಕ್ತಿಗಳು ಈ ಕೆಳಗನ ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಿ: 8970476050, 9591514154, 9686248369, 8970446644, 9505894247 .
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…