ರಾಜ್ಯದ ಕಾಂಗ್ರೆಸ್ ಸರಕಾರ(Congress Govt) ಮಹಿಳೆಯರಿಗೆ(Women) ಗುಡ್ ನ್ಯೂಸ್ ಕೊಟ್ಟಿದ್ದು, ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್(Adhar Card) ತೋರಿಸಿದರೂ ಸಾಕು ಉಚಿತವಾಗಿ ಪ್ರಯಾಣಿಸಬಹುದಾಗಿದೆ (Free Bus). ಈ ಬಗ್ಗೆ ಆದೇಶವನ್ನು ಹೊರಡಿಸಲಾಗಿದೆ.
ಕರ್ನಾಟಕ ಸರ್ಕಾರವು ಶಕ್ತಿ ಯೋಜನೆಯಡಿ ರಾಜ್ಯದ ಮಹಿಳಾ ಪ್ರಯಾಣಿಕರಿಗೆ ನಿಗಮದ ವಾಹನಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಿದ್ದು ಹಾಗೂ ಮುಂದುವರೆದ ಉಲ್ಲೇಖಿತ ಪತ್ರ-ತಿರ ತಿದ್ದುಪಡಿ ಆದೇಶದಲ್ಲಿ ಸದರಿ ಉಚಿತ ಪ್ರಯಾಣಕ್ಕಾಗಿ ಮಹಿಳಾ ಪ್ರಯಾಣಿಕರು ಮೂಲನಕಲು/ಡಿಜಿಲಾಕರ್ (Digilocker) ಹಾರ್ಡ್ ಮತ್ತು ಸಾಫ್ಟ್ ಕಾಪಿ) ಮಾದರಿಯಲ್ಲಿ ತೋರಿಸಿದಲ್ಲಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲು ತಿಳಿಸಲಾಗಿರುತ್ತದೆ ಎಂದು ಸರಕಾರದ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.
ಕೆಲವು ನಿರ್ವಾಹಕರು ಮೊಬೈಲಲ್ಲಿ ಇದ್ದರೆ ಸಾಲದು ಎಂದು ಮಹಿಳಾ ಪ್ರಯಾಣಿಕರಿಗೆ ತೊಂದರೆಯುಂಟು ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿ ಬರುತ್ತಿರುವುದಾಗಿ, ಈ ಹಿನ್ನೆಲೆಯಲ್ಲಿ ಮಹಿಳಾ ಪ್ರಯಾಣಿಕರು ಮೊಬೈಲ್ ನಲ್ಲಿ ಉಲ್ಲೇಖಿತ ಆದೇಶಗಳಲ್ಲಿ ತಿಳಿಸಿರುವಂತೆ ತೋರಿಸುವ ಯಾವುದಾದರೂ ಒಂದು ಅಧಿಕೃತ ಗುರುತಿನ ಚೀಟಿಯನ್ನು ಪರಿಗಣಿಸಿ ಶೂನ್ಯ ಮೊತ್ತದ ಮಹಿಳಾ ಟಿಕೆಟ್ ವಿತರಿಸಲು ಮತ್ತೊಮ್ಮೆ ಎಲ್ಲಾ ನಿರ್ವಾಹಕರಿಗೆ ತಿಳುವಳಿಕೆ ನೀಡಲು ಹಾಗೂ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣಕ್ಕೆ ಆಡಚಣೆಯಾಗದಂತೆ ಹಾಗೂ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸುವಂತೆ ಉಲ್ಲೇಖ-4 ರ ಪತ್ರದಲ್ಲಿ ಸೂಚಿಸಲಾಗಿದೆ.
The Congress Govt of the state has given good news to women, from now on they can travel for free by showing Adhar Card on their mobile phones. An order has been issued in this regard.